News Karnataka Kannada
Wednesday, April 24 2024
Cricket
ಕರ್ನಾಟಕ

ಕೊರೊನಾ ಸೋಂಕಿತನ ಅಂತ್ಯಸಂಸ್ಕಾರದಲ್ಲಿ ಭಾಗಿ: ೧೪ ಮಂದಿಗೆ ಸೋಂಕು

Photo Credit :

ಕೊರೊನಾ ಸೋಂಕಿತನ ಅಂತ್ಯಸಂಸ್ಕಾರದಲ್ಲಿ ಭಾಗಿ: ೧೪ ಮಂದಿಗೆ ಸೋಂಕು

ತಾಂಡವಪುರ: ಕೊರೋನಾ ಸೋಂಕಿತನ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದ ಸುಮಾರು 14 ಹೆಚ್ಚು ಮಂದಿಗೆ ನಡೆಸಿದ ರಾಪಿಡ್ ಟೆಸ್ಟ್‍ನಲ್ಲಿ ಸೋಂಕು ದೃಢಪಟ್ಟಿರುವುದರಿಂದ ಸೋಂಕಿತನ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದವರಲ್ಲಿ ಆತಂಕ ಮನೆ ಮಾಡಿದೆ.

ನಂಜನಗೂಡು ತಾಲೂಕು ವರುಣ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಕುಂಬಾರರ ಬೀದಿಯ ವ್ಯಕ್ತಿಯೊಬ್ಬ ಅನಾರೋಗ್ಯದಿಂದ ಬಳಲುತ್ತಿದ್ದು, ಆತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆತನ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೊರೋನ ಪರೀಕ್ಷೆಯ ವರದಿಯು ಬರುವುದಕ್ಕಿಂತ ಮುನ್ನ ಆತನು ಮೃತಪಟ್ಟಿದ್ದು ಆತನ ಶವವನ್ನು ಶುಕ್ರವಾರ ತಾಂಡವಪುರ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ವಿಷಯ ತಿಳಿದ ಹದಿನಾರು ಗ್ರಾಮದ ಆರೋಗ್ಯ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ರವೀಂದ್ರ ಅವರ ನೇತೃತ್ವದಲ್ಲಿ ವೈದ್ಯರ ತಂಡ ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ಕಾರ್ಖಾನೆಯ ಕಾರ್ಮಿಕರು ಸೇರಿದಂತೆ ನಡೆದ ರಾಪಿಡ್ ಟೆಸ್ಟ್ ನಲ್ಲಿ 22ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದ್ದು ಒಟ್ಟು ತಾಂಡವಪುರ ಸೇರಿದಂತೆ ಸುತ್ತಮುತ್ತ ಒಟ್ಟು 50ಕ್ಕೂ ಹೆಚ್ಚು ಕೊರೋನಾ ಸೋಂಕು ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಈ ಸಂದರ್ಭದಲ್ಲಿ ಹದಿನಾರು ಗ್ರಾಮದ ಆರೋಗ್ಯ ಪ್ರಾಥಮಿಕ ಕೇಂದ್ರದ ಮೇಲ್ವಿಚಾರಕ ನಾಗೇಂದ್ರ ಹಾಗೂ ಆರೋಗ್ಯ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದು ಸೋಂಕಿತರನ್ನು ನಂಜನಗೂಡಿನ ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು