News Karnataka Kannada
Wednesday, April 17 2024
Cricket
ಕರ್ನಾಟಕ

ಕೋವಿಡ್​ನಿಂದ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್​ ನಿಧನ

Photo Credit :

ಕೋವಿಡ್​ನಿಂದ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್​   ನಿಧನ

ಬೆಳಗಾವಿ: ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದ ರೈತ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್​ (78) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಳಗಾವಿ ‌ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾಗಿದ್ದ ಬಾಬಾಗೌಡ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ವಾರದ ಹಿಂದೆ ಬಾಬಾಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಾಬಾಗೌಡ ಅವರು 1989ರಲ್ಲಿ ಬೆಳಗಾವಿ ಗ್ರಾಮೀಣ, ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಗೆಲುವು ದಾಖಲಿಸಿ ವಿಧಾನಸಭೆ ಪ್ರವೇಶಿಸಿದ್ದರು.1998ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಗಿ ಗೆಲುವು ಸಾಧಿಸಿದ್ದ ಅವರು, ಕೇಂದ್ರ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ದೇಶದಲ್ಲಿ ಗ್ರಾಮ ಸಡಕ್ ಯೋಜನೆ ಜಾರಿಗೊಳಿಸಿದ್ದ ಕೀರ್ತಿ ಬಾಬಾಗೌಡರದ್ದಾಗಿದೆ.ಬಳಿಕ ರಾಜಕೀಯ ಏಳು, ಬೀಳು ಅನುಭವಿಸಿದ್ದ ಪಾಟೀಲ್​ ಅವರು ರಾಜ್ಯದಲ್ಲಿ ರೈತ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಕೇಂದ್ರದ ನೂತನ ಕೃಷಿ ಕಾಯ್ದೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು