News Karnataka Kannada
Thursday, April 25 2024
ಕರ್ನಾಟಕ

ಕೋವಿಡ್: ಬಾಗಲಕೋಟೆಯಲ್ಲಿ 209 ಜನ ಗುಣಮುಖ, 172 ಹೊಸ ಪ್ರಕರಣ ದೃಢ

Photo Credit :

ಕೋವಿಡ್: ಬಾಗಲಕೋಟೆಯಲ್ಲಿ 209 ಜನ ಗುಣಮುಖ, 172 ಹೊಸ ಪ್ರಕರಣ ದೃಢ

ಬಾಗಲಕೋಟೆ: ಜಿಲ್ಲೆಯಲ್ಲಿ 209 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 172 ಕೊರೊನಾ ಪ್ರಕರಣಗಳು ಹಾಗೂ 1 ಮರಣ ಪ್ರಕರಣಗಳು ಸೋಮವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 6214 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 5384 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 30, ಬಾದಾಮಿ 45, ಹುನಗುಂದ 53, ಬೀಳಗಿ 2, ಮುಧೋಳ 23, ಜಮಖಂಡಿ 18 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ದೃಡಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 219 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 249 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 59698 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 52956 ನೆಗಟಿವ್ ಪ್ರಕರಣ, 6214 ಪಾಜಿಟಿವ್ ಪ್ರಕರಣ ಹಾಗೂ 74 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 756 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 214 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 585 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 8698 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು