News Karnataka Kannada
Sunday, April 21 2024
Cricket
ಕರ್ನಾಟಕ

ಖಾಸಗಿ ಶಾಲೆಗಳ ಕಡೆಗಣನೆ: ಆಡಳಿತ ಮಂಡಳಿ, ಶಿಕ್ಷಕರ ಪ್ರತಿಭಟನೆ

Photo Credit :

ಖಾಸಗಿ ಶಾಲೆಗಳ ಕಡೆಗಣನೆ: ಆಡಳಿತ ಮಂಡಳಿ, ಶಿಕ್ಷಕರ ಪ್ರತಿಭಟನೆ

ಮಡಿಕೇರಿ: ಕೋವಿಡ್ ಲಾಕ್‍ಡೌನ್ ಪರಿಣಾಮ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಹಾಗೂ ಖಾಸಗಿ ಶಿಕ್ಷಕರನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯಿಸಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು.

ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಗಣಪತಿ ಮಾತನಾಡಿ, ಅನುದಾನ ರಹಿತ ಶಾಲೆಗಳ ಶಿಕ್ಷಕರು ಸರ್ಕಾರದಿಂದ ಯಾವುದೇ ನೆರವು ದೊರೆಯದೆ ಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಖಾಸಗಿ ಶಾಲೆಗಳ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕೆಂದು ಒತ್ತಾಯಿಸಿದರು.

2019-20ನೇ ಸಾಲಿನ ಆರ್‍ಟಿಇ ಅನುದಾನವನ್ನು ನೀಡದೆ ಶಿಕ್ಷಣ ಇಲಾಖೆ ಸತಾಯಿಸುತ್ತಿದೆ. ಯಾವುದೇ ಕಾರಣವನ್ನು ನೀಡದೆÀ ಪಾವತಿಸಬೇಕಾದ ಮೊತ್ತವನ್ನು ಉದ್ದೇಶಪೂರ್ವಕವಾಗಿ ಕಡಿತಗೊಳಿಸಿರುವುದು ಖಂಡನೀಯ ಎಂದರು.

2017 ಕ್ಕೂ ಮೊದಲು ಪ್ರಾರಂಭವಾಗಿರುವ ಶಿಕ್ಷಣ ಸಂಸ್ಥೆಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ನೀಡುವ ಬದಲು, ಹೊಸ ಶಾಲೆಗಳ ಷರತ್ತುಗಳನ್ನು ಹಾಕುವ ಮೂಲಕ ಕಿರುಕುಳ ನೀಡಲಾಗುತ್ತಿದೆ. ಅಲ್ಲದೆ ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡಲಾಗಿದೆ ಎಂದು ಆರೋಪಿಸಿದರು.

ಸಂಘದ ಕಾರ್ಯದರ್ಶಿ ಕೊಟ್ರಂಗಡ ತಿಮ್ಮಯ್ಯ, ಸಲಹೆಗಾರ ಎಂ.ಎಸ್. ಪೂವಯ್ಯ, ಸದಸ್ಯರಾದ ಸಚಿನ್ ವಾಸುದೇವ್, ಲಿಖಿತ್ ಕುಮಾರ್, ಶಿಕ್ಷಕರಾದ ಬಿಂದುಸಾರ, ಗೌರಮ್ಮ ಮತ್ತಿತತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು