News Karnataka Kannada
Friday, April 12 2024
Cricket
ಕರ್ನಾಟಕ

ಗಿರಿಜನ ಹಾಡಿಗಳಿಗೆ ಮೂಲ ಸೌಲಭ್ಯ ಕಲ್ಪಿಸಿ: ಸಚಿವ ವಿ.ಸೋಮಣ್ಣ ಸೂಚನೆ

Photo Credit :

ಗಿರಿಜನ ಹಾಡಿಗಳಿಗೆ ಮೂಲ ಸೌಲಭ್ಯ ಕಲ್ಪಿಸಿ: ಸಚಿವ ವಿ.ಸೋಮಣ್ಣ ಸೂಚನೆ

ಮಡಿಕೇರಿ: ಜಿಲ್ಲೆಯ ಆದಿವಾಸಿ ಗಿರಿಜನರು ವಾಸಿಸುವ ಹಾಡಿಗಳಿಗೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಕನಿಷ್ಠ ಮೂಲ ಸೌಲಭ್ಯಳನ್ನಾದರೂ ಕಲ್ಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಆದಿವಾಸಿ ಗಿರಿಜನರಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳು ತಲುಪಿಲ್ಲ ಎಂದರೆ ಬೇಸರವಾಗುತ್ತದೆ. ಮೂಲ ಸೌಲಭ್ಯ ಕಲ್ಪಿಸುವುದಕ್ಕೆ ಯಾರೂ ಸಹ ತೊಂದರೆ ನೀಡಬಾರದು ಎಂದು ಖಡಕ್ಕಾಗಿ ಸಚಿವರು ಎಚ್ಚರಿಸಿದರು. 

ಮೂಲ ಸೌಲಭ್ಯ ಕಲ್ಪಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಸಹಕಾರ ನೀಡದಿದ್ದರೆ ಶಾಸಕರು ಮತ್ತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಬೇಕು. ಗಿರಿಜನರು ಬದುಕಲು ಸಮಾನ ಅವಕಾಶ ನೀಡಬೇಕು. ಇನ್ನು ಎಷ್ಟು ವರ್ಷ ವಿದ್ಯುತ್ ಸಂಪರ್ಕ, ಕುಡಿಯುವ ನೀರು, ರಸ್ತೆ ಇಲ್ಲದೆ ಹಾಡಿಯ ಜನರು ಬದುಕಬೇಕು. ಅಧಿಕಾರಿಗಳಿಗೆ ನೋವು ಆಗುವುದಿಲ್ಲವೇ ಎಂದು ಸೂಚ್ಯವಾಗಿ ನುಡಿದರು.

ಬಡವರ ಕೆಲಸಕ್ಕೆ ದೊಡ್ಡಸ್ತಿಕೆ ತೋರಿಸುವುದು ಬೇಡ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿ ಬಡ ಜನರಿಗೆ ಕೈಲಾದಷ್ಟು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು. ಅದನ್ನು ಬಿಟ್ಟು ಪ್ರತಿಷ್ಠೆ ತೋರುವುದು ಬೇಡ ಎಂದು ಸಚಿವರು ಸೂಚಿಸಿದರು.

ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಸೌಭಾಗ್ಯ ಯೋಜನೆಯಡಿ ಜಿಲ್ಲೆಗೆ 16 ಕೋಟಿ ರೂ. ಬಿಡುಗಡೆಯಾಗಿದೆ. ಆದರೆ ಪ್ರಗತಿ ಕಾಣುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಕೋವಿ ಇಟ್ಟುಕೊಳ್ಳುವ ಪದ್ಧತಿ ಇದ್ದು, ಇತ್ತೀಚೆಗೆ ಪರವಾನಗಿಯನ್ನು ಸಕಾಲದಲ್ಲಿ ನೀಡುತ್ತಿಲ್ಲ ಎಂದು ಅವರು ದೂರಿದರು.

ಇದಕ್ಕೆ ಧ್ವನಿಗೂಡಿಸಿದ ಶಾಸಕರಾದ ಅಪ್ಪಚ್ಚುರಂಜನ್ ಅವರು ಕೋವಿ ಇರುವವರಿಗೆ ನವೀಕರಣ ಮಾಡುತ್ತಿಲ್ಲ ಎಂದು ದೂರಿದರು.

ಇಂತಹ ವಿಚಾರಗಳನ್ನು ಜಿಲ್ಲಾಡಳಿತ ಶಾಸಕರ ಜೊತೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ಕೋವಿ ಕಡತ ನಿರ್ವಹಿಸುವ ಸಿಬ್ಬಂದಿಗಳನ್ನು ಎರಡು ವರ್ಷಕ್ಕೆ ಒಮ್ಮೆಯಾದರೂ ವರ್ಗಾವಣೆ ಮಾಡಬೇಕು ಎಂದು ಅವರು ಸಲಹೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು