News Karnataka Kannada
Sunday, April 21 2024
Cricket
ಕರ್ನಾಟಕ

ಗುಡೇಕೋಟೆ ದೇವಸ್ಥಾನದಲ್ಲಿ ಕರಡಿಗಳ ಹಿಂಡು ಪ್ರತ್ಯಕ್ಷ

Photo Credit :

ಗುಡೇಕೋಟೆ ದೇವಸ್ಥಾನದಲ್ಲಿ ಕರಡಿಗಳ ಹಿಂಡು ಪ್ರತ್ಯಕ್ಷ

ಬಳ್ಳಾರಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯ ಊರ ಮುಂದಿನ ದೇವಸ್ಥಾನದಲ್ಲಿ ಕರಡಿಗಳ ಹಿಂಡು ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ.
ಗುಡೇಕೋಟೆ ಗ್ರಾಮದ ಹತ್ತಿರವಿರುವ ಪಂಚಲಿಂಗೇಶ್ವರ ದೇವಾಸ್ಥಾನದ ಹತ್ತಿರ ಇಂದು ಸಂಜೆ 7 ಗಂಟೆ ಸುಮಾರಿಗೆ ಕರಡಿಗಳ ಗುಂಪೊಂದು ಪ್ರತ್ಯಕ್ಷವಾಗಿದೆ. ಒಂದು ಕಡೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಗ್ರಾಮದ ಸುತ್ತಮುತ್ತಲಿನ ಜನರ ಓಡಾಟ ವಿರಳವಾಗಿದೆ. ಹೀಗಾಗಿ ಆಹಾರ ಅರಸಿಕೊಂಡು ಬಂದ ಕರಡಿಗಳ ಹಿಂಡು ದೇವಸ್ಥಾನದಲ್ಲಿ ಇರಿಸಲಾಗಿದ್ದ ದೇವರ ಮುಂದಿನ ನೈವೇದ್ಯ ತಿನ್ನಲು ಬಂದಿದೆ. ದೇವಸ್ಥಾನದ ಪೂಜಾರಿ ತಮ್ಮ ಮೊಬೈಲ್ ನಲ್ಲಿ ಕರಡಿಗಳ ಚಿತ್ರವನ್ನು ಸೆರೆ ಹಿಡಿದಿದ್ದಾರೆ. ಗುಡೇಕೋಟೆ ಭಾಗದಲ್ಲಿ ಹೆಚ್ಚಿನ ಕರಡಿಗಳಿದ್ದು, ಜನರ ಓಡಾಟ ವಿರಳವಾದ ಹಿನ್ನೆಲೆಯಲ್ಲಿ ಗ್ರಾಮದ ಸುತ್ತಮುತ್ತಲಿನಲ್ಲಿ ಕರಡಿಗಳ ಓಡಾಟ ಹೆಚ್ಚಾಗಿದೆ.
ಲಾಕ್‍ಡೌನ್ ನಿಂದಾಗಿ ಮಾನವನ ಪರಿಸರದ ಮೇಲಿನ ದೌರ್ಜನ್ಯ ಕಡಿಮೆಯಾಗಿದೆ. ಹೀಗಿರುವಾಗ ಇತ್ತೀಚೆಗಷ್ಟೇ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರಾವಳಿ ಭಾಗದಲ್ಲಿ ಆಮೆಗಳು ಸಮುದ್ರ ತೀರಕ್ಕೆ ಬಂದು ಮಾನವನ ಭಯವಿಲ್ಲದೇ ಮೊಟ್ಟೆ ಇಟ್ಟು ಮರಿ ಮಾಡಲು ಆರಂಭಿಸಿದ್ದು, ಹೊನ್ನಾವರದ ಕಾಸರಗೋಡು, ಟೊಂಕ ಸೇರಿದಂತೆ ತೀರ ಪ್ರದೇಶದಲ್ಲಿ ಓಲಿವ್ ರಿಡ್ಲಿ ಎಂಬ ಜಾತಿಯ ಅಳಿವಿನಂಚಿನ ಆಮೆಗಳು ಫೆಬ್ರವರಿಯಿಂದ ಈವರೆಗೆ ಸಾವಿರಾರು ಮೊಟ್ಟೆಗಳನ್ನು ಇಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು