News Karnataka Kannada
Wednesday, April 24 2024
Cricket
ಕರ್ನಾಟಕ

ಗುಣಮಟ್ಟದ ಕೆಲಸದಲ್ಲಿ  ರಾಜಿಯ ಪ್ರಶ್ನೆಯೇ ಇಲ್ಲ: ಹೆಚ್ಡಿಕೆ

Photo Credit :

ಗುಣಮಟ್ಟದ ಕೆಲಸದಲ್ಲಿ  ರಾಜಿಯ ಪ್ರಶ್ನೆಯೇ ಇಲ್ಲ: ಹೆಚ್ಡಿಕೆ

ಚನ್ನಪಟ್ಟಣ: ಗುಣಮಟ್ಟದ ಕೆಲಸದಲ್ಲಿ  ರಾಜಿಯ ಪ್ರಶ್ನೆಯೇ ಇಲ್ಲ. ನಾನು ಕಲಾವಿದರ ಕ್ಷೇತ್ರದಿಂದ ಆಯ್ಕೆಯಾದವನಲ್ಲ, ಜನರಿಂದ ಆಯ್ಕೆಯಾದವನು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅವರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಅಭಿವೃದ್ಧಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿಡುಗಡೆಯಾದ ಸಾಕಷ್ಟು ಅನುದಾನವನ್ನು ಬಳಕೆ ಮಾಡದಿರುವುದರ ಬಗ್ಗೆ ಅಧಿಕಾರಿಗಳ ಮೇಲೆ ಛಾಟಿ ಬೀಸಿ, ಆದಷ್ಟು ಬೇಗ ಅನುದಾನವನ್ನು ಬಳಕೆ ಮಾಡಿಕೊಂಡು, ಅಭಿವೃದ್ಧಿಗೆ ಪೂರಕವಾಗಿ ತಮ್ಮ ಬೇಡಿಕೆಯನ್ನು ನೀಡುವಂತೆ ತಿಳಿಸಿದರು.

ಪ್ರತಿನಿತ್ಯ ಮಾಧ್ಯಮಗಳಲ್ಲಿ ಕ್ಷೇತ್ರದ ಸಾಕಷ್ಟು ಕಾಮಗಾರಿಗಳು ಕಳಪೆ ಮಟ್ಟದಿಂದ ಕೂಡಿದೆ. ಅಧಿಕಾರಿಗಳನ್ನು ಹೇಳುವವರು, ಕೇಳುವವರು ಯಾರು ಇಲ್ಲದಂತದಾಗಿದ್ದಾರೆ ಎಂದು ವರದಿ ಪ್ರಕಟವಾಗಿವೆ ಎಂದು ಅಧಿಕಾರಿಗಳ ಮೇಲೆ ಗರಂ ಆದ ಕುಮಾರಸ್ವಾಮಿ ಕ್ಷೇತ್ರದ ಅಭಿವೃದ್ದಿ ಕೆಲಸದಲ್ಲಿ ನನ್ನ ಮೊದಲೆ ಆದ್ಯತೆ ಇದೆ. ಆದರೆ ನಿರ್ಲಕ್ಷ್ಯ ಅಧಿಕಾರಿಗಳ ಕರ್ತವ್ಯಲೋಪವನ್ನು ಸಹಿಸುವುದಿಲ್ಲ, ಇಷ್ಟವಿದ್ದರೆ ಕೆಲಸ ಮಾಡಿ ಇಲ್ಲ್ಲ ಅಂದರೆ ವರ್ಗಾವಣೆ ಮಾಡಿಕೊಂಡು ಹೋಗಿ ಎಂದು  ಗುಡುಗಿದರು.

ನಾನು ಕ್ಷೇತ್ರದ ಮತದಾರರಿಂದ ಆಯ್ಕೆಯಾಗಿದ್ದೇನೆ, ಬೇರೆಯವರಂತೆ ಹಿಂಬಾಗಿಲಿನಿಂದ ಆದರೆ ಕಲಾವಿದರ ಕ್ಷೇತ್ರದಿಂದ ಆಯ್ಕೆಯಾದವನಲ್ಲ ಎಂದು ಎಂ.ಎಲ್.ಸಿ. ಸಿ.ಪಿ.ಯೋಗೇಶ್ವರ್‍ ಅವರನ್ನು ಪರೋಕ್ಷವಾಗಿ ಟೀಕೆ ಮಾಡಿದ ಅವರು, ಬೇರೆಯವರ ಮಾತಿಗೆ ಮನ್ನಣೆ ನೀಡಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಕಂಡು ಬಂದರೆ ನಾನು ಯಾವುದೇ ಕಾರಣಕ್ಕೂ ಸಹಿಸುವನಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.

ಪೊಲೀಸರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ಸಾಕಷ್ಟು ಪೊಲೀಸ್ ಅಧಿಕಾರಿಗಳು ಕೆಲವರ ಆದೇಶದಂತೆ ನಡೆಯುತ್ತಿರುವುದಾಗಿ ತಿಳಿದುಬಂದಿದ್ದು, ತಾಲೂಕಿನ ಅಕ್ಕೂರು ಪೊಲೀಸ್ ಠಾಣೆಯಲ್ಲಿ ನೊಂದವರ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿರುವುದರ ಮಾಹಿತಿ ಬಂದಿದ್ದು, ಇದು ಸರಿಯಲ್ಲ ಮುಂದೆ ಈ ರೀತಿಯಾಗದಂತೆ ಎಚ್ಚರ ವಹಿಸಬೇಕೆಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು