News Karnataka Kannada
Tuesday, April 23 2024
Cricket
ಕರ್ನಾಟಕ

ಚಾಮರಾಜನಗರದಲ್ಲಿ ಈ ಬಾರಿ ಸರಳ ದಸರಾ ಆಚರಣೆ

Photo Credit :

ಚಾಮರಾಜನಗರದಲ್ಲಿ ಈ ಬಾರಿ ಸರಳ ದಸರಾ ಆಚರಣೆ

ಚಾಮರಾಜನಗರ: ಕೊರೊನಾ ಹಿನ್ನಲೆಯಲ್ಲಿ ಈ ಬಾರಿ ಚಾಮರಾಜನಗರ ಜಿಲ್ಲೆಯಲ್ಲಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಣೆ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ.

ದಸರಾ ಆಚರಣೆ ಸಂಬಂಧ ನಗರದ ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಸುರೇಶ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಆರಂಭದಲ್ಲಿಯೇ ಸಚಿವರಾದ ಸುರೇಶ್‍ಕುಮಾರ್ ಅವರು ಉಪಸ್ಥಿತರಿದ್ದ ಶಾಸಕರು, ಇತರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ದಸರಾ ಆಚರಣೆ ಹೇಗಿರಬೇಕೆಂಬ ಬಗ್ಗೆ ಸಲಹೆ ನೀಡುವಂತೆ ಮನವಿ ಮಾಡುತ್ತಾ ಈ ಬಾರಿ ಮೈಸೂರಿನಲ್ಲಿಯೂ ಸಾಂಪ್ರದಾಯಿಕ ಹಾಗೂ ಸರಳ ದಸರಾ ಆಚರಣೆಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋವಿಡ್-19 ಕಾರಣದಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿಲ್ಲ. ಹೀಗಾಗಿ ಚಾಮರಾಜನಗರ ಜಿಲ್ಲೆಯಲ್ಲೂ ದಸರಾ ಆಚರಿಸುವ ಕುರಿತು ಅಭಿಪ್ರಾಯ, ಸಲಹೆಗಳನ್ನು ನೀಡುವಂತೆ ಕೋರಿದರು.

ಈ ವೇಳೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಹೀಗಾಗಿ ಸಾಮಾಜಿಕ ಅಂತರ, ಇನ್ನಿತರ ಕಾರಣಗಳಿಂದ ಈ ಹಿಂದಿನಂತೆ ಪೂಜೆ ಮತ್ತಿತರ ಸಾಂಪ್ರದಾಯಿಕ ಆಚರಣೆ ಮಾತ್ರ ಇರುವುದು ಒಳಿತು. ಆದರೆ ದೀಪಾಲಂಕಾರ ಮಾತ್ರ ಎಂದಿನಂತೆ ಇರಲಿ ಬೇರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಬೇಡ ಎಂಬ ಅಭಿಪ್ರಾಯ ತಿಳಿಸಿದರು.

ಇನ್ನು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ ಕುಲಗಾಣರವರು ಮಾತನಾಡಿ, ಹೆಚ್ಚಿನ ಜನರು ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಸೇರುತ್ತಿದ್ದರು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಜನಸಂದಣಿಗೆ ಅವಕಾಶ ಮಾಡಿಕೊಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಆನ್ಲೈನ್ ಮೂಲಕ ಮಾತನಾಡಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚು ಆಗುತ್ತಿದೆ. ಚಳಿ ವಾತಾವರಣ ಸಹ ಇರುವುದರಿಂದ ಐಎಲ್‍ಐ ಮತ್ತು ಸಾರಿ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಹೀಗಾಗಿ ಎಲ್ಲಾ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿದೆ. ಈ ಎಲ್ಲ್ಲ ಅಂಶಗಳನ್ನು ಗಮನದಲ್ಲಿಇಟ್ಟುಕೊಂಡು ಆಚರಣೆ ಮಾಡಬೇಕಾಗುತ್ತದೆ. ದೀಪಾಲಂಕಾರ ಮಾಡಲು ಸಾರ್ವಜನಿಕರ ಸಹಕಾರ ಕೋರಬಹುದು ಎಂದರು.

ಕೊನೆಯಲ್ಲಿ ದಸರಾ ಆಚರಣೆ ಸಂಬಂಧ ಎಲ್ಲರ ಅಭಿಪ್ರಾಯ, ಸಲಹೆ ಆಲಿಸಿದ ಉಸ್ತುವಾರಿ ಸಚಿವ ಎಸ್.ಸುರೇಶ್‍ಕುಮಾರ್ ಮಾತನಾಡಿ, ಎಲ್ಲರ ಒಮ್ಮತದ ಅಭಿಪ್ರಾಯದಂತೆ ಹೆಚ್ಚು ಜನರು ಪಾಲ್ಗೊಳ್ಳುವ ಕಾರ್ಯಕ್ರಮ ಮಾಡುವುದು ಸೂಕ್ತವಲ್ಲ ಎಂಬುದು ವ್ಯಕ್ತವಾಗಿದೆ. ಹೀಗಾಗಿ ಈ ಬಾರಿ ಸಾಂಪ್ರದಾಯಿಕವಾಗಿ ದಸರಾ ಆಚರಿಸೋಣ, ಕೊರೊನಾ ಮುಕ್ತವಾದ ನಂತರ ವೈಭವದಿಂದ ಮುಂದಿನ ಬಾರಿ ದಸರಾ ನಡೆಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎನ್ನುವ ಮೂಲಕ ಈ ಬಾರಿ ಸರಳ ದಸರಾ ಆಚರಿಸುವ ನಿರ್ಧಾರ ಮಾಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು