News Karnataka Kannada
Wednesday, April 24 2024
Cricket
ಕರ್ನಾಟಕ

ಚಾಮರಾಜನಗರದಲ್ಲಿ ಗರ್ಭಿಣಿ ಅನುಮಾನಾಸ್ಪದ ಸಾವು

Photo Credit :

ಚಾಮರಾಜನಗರದಲ್ಲಿ ಗರ್ಭಿಣಿ ಅನುಮಾನಾಸ್ಪದ ಸಾವು

ಚಾಮರಾಜನಗರ: ಏಳು ತಿಂಗಳ ಗರ್ಭಿಣಿಯೊಬ್ಬರು ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಆದರೆ ಮೃತೆಯ ಪೋಷಕರು ಇದೊಂದು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರತ್ನಮ್ಮ ಎಂಬಾಕೆಯೇ ಅನುಮಾನಾಸ್ಪದವಾಗಿ ಮೃತಪಟ್ಟ ಗರ್ಭಿಣಿ. ಈಕೆಯನ್ನು ಕಳೆದ ಎರಡು ವರ್ಷಗಳ ಹಿಂದೆ ಮಾಂಬಳ್ಳಿ ಗ್ರಾಮದ ಚಿನ್ನರಾಜು ಎಂಬಾತ ಮದುವೆಯಾಗಿದ್ದು, ಸದ್ಯ ಈಕೆ ಏಳು ತಿಂಗಳ ಗರ್ಭಿಣಿಯಾಗಿದ್ದಳು. ಈ ನಡುವೆ ಗಂಡ ಚಿನ್ನರಾಜು ವರದಕ್ಷಿಣೆ ಕಿರುಕುಳ ನೀಡುತ್ತಿದ್ದನು ಎಂದು ಆಕೆಯ ಪೋಷಕರು ಆರೋಪಿಸುತ್ತಿದ್ದಾರೆ.

ಆರೋಗ್ಯವಾಗಿದ್ದ ರತ್ನಮ್ಮ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದಾಳೆ ಎಂಬ ಮಾಹಿತಿಯನ್ನು ಗಂಡನ ಮನೆಯವರು ಆಕೆಯ ಪೋಷಕರಿಗೆ ನೀಡಿದ್ದಾರೆ. ಇದೀಗ ಪೋಷಕರು ಆಕೆಯನ್ನು ಹೊಡೆದು ಕೊಲ್ಲಲಾಗಿದೆ ಎಂಬ ಆರೋಪವನ್ನು ಮಾಡುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತೆಯ ಪೋಷಕರು ಮಾಂಬಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು