News Karnataka Kannada
Thursday, April 25 2024
ಕರ್ನಾಟಕ

ಚಾಮರಾಜನಗರದಲ್ಲಿ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ: ತಾಯಿ ಮಗು ಕ್ಷೇಮ

Photo Credit :

 ಚಾಮರಾಜನಗರದಲ್ಲಿ  ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ: ತಾಯಿ ಮಗು ಕ್ಷೇಮ

ಚಾಮರಾಜನಗರ: ನಗರದ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ಮಹಿಳೆಯೊಬ್ಬರು ಇಂದು ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ತಾಯಿ ಮಗು ಕ್ಷೇಮವಾಗಿದ್ದಾರೆ. ಹನೂರು ತಾಲೂಕಿನ ಗಾಣಿಗ ಮಂಗಲದ 21 ವರ್ಷದ ಮಹಿಳೆ ಹೆಣ್ಣು ಮಗುವಿಗೆ ಜನ್ಮವಿತ್ತವರು. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಮಹಿಳೆ ಜನ್ಮ ನೀಡಿದ ಮೊದಲ ಪ್ರಕರಣ ಇದಾಗಿದೆ.

ಈ ಮಹಿಳೆ ಕಳೆದ ಜುಲೈ 17 ರಂದು ಹೆರಿಗೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮಾರ್ಗ ಅನುಸೂಚಿ ಪ್ರಕಾರ ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಬಂದ ವರದಿಯಲ್ಲಿ ಕೋವಿಡ್ ಸೋಂಕು ಇರುವುದು ಧೃಢಪಟ್ಟಿತು.ಗರ್ಭಿಣಿಗೆ 41 ವಾರಗಳು ತುಂಬಿದ್ದರಿಂದ ಆಕೆಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲು ಆಸ್ಪತ್ರೆ ವೈದ್ಯರು ನಿರ್ಧರಿಸಿದರು.

ಅದರಂತೆ ಇಂದು ಸಂಜೆ 4.30 ರಿಂದ 6 ಗಂಟೆಯವರೆಗೆ ನಗರದ ಕೋವಿಡ್ ಆಸ್ಪತ್ರೆಯ ವಿಶೇಷ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಮಹಿಳೆಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಲಾಯಿತು.
ಹೆಣ್ಣು ಮಗು ಜನಿಸಿದ್ದು, ಆರೋಗ್ಯವಾಗಿದೆ.

ಪ್ರಸೂತಿ ತಜ್ಞೆ ಡಾ. ಸ್ವಾತಿ, ಅರವಳಿಕೆ ತಜ್ಞ ಡಾ. ಸಮರ್ಥ್, ಮಕ್ಕಳ ತಜ್ಞೆ ಡಾ. ಲಕ್ಷ್ಮಿ ಮತ್ತು ಸಿಬ್ಬಂದಿ ಪುಟ್ಟಲಿಂಗಮ್ಮ ಮತ್ತು ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಿದೆ.

ಮಹಿಳೆ ದಾಖಲಾಗಿದ್ದ ಹೆರಿಗೆ ವಾರ್ಡ್ ಅನ್ನು ಸ್ಯಾನಿಟೈಸ್ ಮಾಡಲಾಗಿದೆ. ವಾರ್ಡಿನಲ್ಲಿ ಇದ್ದ ಇನ್ನೂ ಐವರನ್ನು ಪ್ರಾಥಮಿಕ ಸಂಪರ್ಕಿತರೆಂದು ಪರಿಗಣಿಸಿ ಇವರ ಕೋವಿಡ್ ಪರೀಕ್ಷೆಗೆ ಕ್ರಮ ತೆಗೆದುಕೊಳ್ಳಲಾಗಿದೆ.ಸದ್ಯಕ್ಕೆ ಇವರನ್ನು ಬೇರೆ ಕಡೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಶಸ್ರಚಿಕಿತ್ಸಕರಾದ ಡಾ.ಕೃಷ್ಣ ಪ್ರಸಾದ್ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು