News Karnataka Kannada
Tuesday, April 23 2024
Cricket
ಕರ್ನಾಟಕ

ಚಾಮರಾಜನಗರ ಆಕ್ಸಿಜನ್ ದುರಂತ: ಜಿಲ್ಲಾ ಆಸ್ಪತ್ರೆಗೆ ಸಿದ್ದರಾಮಯ್ಯ ಭೇಟಿ

Photo Credit :

ಚಾಮರಾಜನಗರ ಆಕ್ಸಿಜನ್ ದುರಂತ: ಜಿಲ್ಲಾ ಆಸ್ಪತ್ರೆಗೆ ಸಿದ್ದರಾಮಯ್ಯ ಭೇಟಿ

ಚಾಮರಾಜನಗರ: ಸೋಮವಾರ ಬೆಳಗಿನ ಝಾವ 24 ಮಂದಿ ಕೋವಿಡ್ ಸೋಂಕಿತರ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಆಕ್ಸಿಜನ್ ಕೊರತೆ ದುರಂತ ದ ಹಿನ್ನೆಲೆಯಲ್ಲಿ ಇಂದು ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹಾಗೂ ಇತರ ಸ್ಥಳೀಯ ಮುಖಂಡರ ಜೊತೆಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಲ್ಲದೆ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಆಕ್ಸಿಜನ್ ಕೊರತೆಯಿಂದ ಕೊರೊನಾ ಸೋಂಕಿತರು ಸಾವಿಗೀಡಾಗಿರುವ ದುರಂತದ ಬಗ್ಗೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಕುರಿತೂ ಮಾಹಿತಿ ಪಡೆದುಕೊಂಡರು. ಈ ಭೇಟಿಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ. ಎಸ್ಪಿ ದಿವ್ಯಾ ಸಾರಾ ಥಾಮಸ್ ಸೇರಿದಂತೆ ವೈದ್ಯಾಧಿಕಾರಿಗಳು ಹಾಜರಿದ್ದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಶಾಸಕರಾದ ಪುಟ್ಟರಂಗಶೆಟ್ಟಿ, ನರೇಂದ್ರ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಆಕ್ಸಿಜನ್ ಪೂರೈಕೆ ಮಾಡಬೇಕಾದ ಸರ್ಕಾರ, ತನ್ನ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿದೆ. ಇದಕ್ಕೆ ಮುಖ್ಯ ಮಂತ್ರಿ ಮತ್ತು ಆರೋಗ್ಯ ಸಚಿವರೇ ನೇರ ಹೊಣೆ ಎಂದು ಆರೋಪಿಸಿದರಲ್ಲದೆ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಘಟನೆಯ ಹೊಣೆ ಹೊತ್ತು ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ ಮಾಡಿದ್ದಾರೆ. .

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು