News Karnataka Kannada
Tuesday, April 23 2024
Cricket
ಕರ್ನಾಟಕ

ಚಾಮರಾಜನಗರ: ವ್ಯಕ್ತಿ ಮೇಲೆ ಕರಡಿ ದಾಳಿ: ಗಾಯ

Photo Credit :

ಚಾಮರಾಜನಗರ: ವ್ಯಕ್ತಿ ಮೇಲೆ ಕರಡಿ ದಾಳಿ: ಗಾಯ

ಚಾಮರಾಜನಗರ: ಅರಣ್ಯ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಹೊಳೆ ಒಡ್ಡು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ರಾಮೇಗೌಡನಹಳ್ಳಿ ಗ್ರಾಮದ ಚಿನ್ನಪ್ಪ ಎಂಬುವರೇ ಕರಡಿ ದಾಳಿಯಿಂದ ತೀವ್ರ ಗಾಯಗೊಂಡವರಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳು ಚಿನ್ನಪ್ಪ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮಲೆ ಮಹದೇಶ್ವರ ವನ್ಯಜೀವಿ ವೀಭಾಗದ ಹೊಳೆ ಒಡ್ಡು ಅರಣ್ಯದಲ್ಲಿ ಚಿನ್ನಪ್ಪ ತೆರಳುತ್ತಿದ್ದಾಗ ಕರಡಿಯೊಂದು ದಿಢೀರ್ ಆಗಿ ಚಿನ್ನಪ್ಪರವರ ಮೇಲೆ ದಾಳಿ ನಡೆಸಿದ ಪರಿಣಾಮ ಚಿನ್ನಪ್ಪರವರ ಕಾಲಿಗೆ ತೀವ್ರತರವಾದ ಗಾಯಗಳಾಗಿದ್ದು, ಅದೃಷ್ಟವಶಾತ್ ಕರಡಿ ಅವರನ್ನು ಬಿಟ್ಟು ಹೋಗಿದ್ದರಿಂದ ಗಾಯಗೊಂಡ ಚಿನ್ನಪ್ಪರವರನ್ನು ರಾಮಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು