News Karnataka Kannada
Sunday, April 14 2024
Cricket
ಕರ್ನಾಟಕ

ಚಿನ್ನ ಕಳ್ಳಸಾಗಾಟ ಆರೋಪ: ಕೇರಳ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Photo Credit :

ಚಿನ್ನ ಕಳ್ಳಸಾಗಾಟ ಆರೋಪ: ಕೇರಳ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಕಾಸರಗೋಡು: ಚಿನ್ನ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಎನ್ಫೋರ್ಸ್ ಮೆಂಟ್ ವಿಚಾರಣೆಗೆ ಒಳಗಾಗಿರುವ ಕೇರಳ ಉನ್ನತ ಶಿಕ್ಷಣ ಸಚಿವ ಕೆ. ಟಿ. ಜಲೀಲ್  ರಾಜೀನಾಮೆ ನೀಡುವಂತೆ ಎಂಎಸ್ ಎಫ್ ವಿದ್ಯಾರ್ಥಿ ಸಂಘಟನೆ  ಇಂದು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ನಡೆಸಿದ ಜಾಥಾ ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿದರು.

ವಿದ್ಯಾನಗರ ದಿಂದ ಮೆರವಣಿಗೆ  ಮೂಲಕ ಆಗಮಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ  ಪ್ರವೇಶ  ಗೇಟ್  ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ದೂಡಿ ಮುನ್ನುಗ್ಗಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.

ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ  ತಳ್ಳಾಟ ನಡೆಯಿತು. ಬಳಿಕ ನಡೆದ ಪ್ರತಿಭಟನೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಎ. ಕೆ. ಎಂ. ಅಶ್ರಫ್ ಉದ್ಘಾಟಿಸಿದರು. ಎಂ. ಎಸ್. ಎಫ್.  ಜಿಲ್ಲಾಧ್ಯಕ್ಷ ಇರ್ಷಾದ್ ಮೊಗ್ರಾಲ್ ಅಧ್ಯಕ್ಷತೆ ವಹಿಸಿದ್ದರು.

ಅಶ್ರಫ್ ಎಡನೀರು, ಆಬಿದ್ ಅರಂಗಾಡಿ, ಅಝರುದ್ದೀನ್, ಸಿದ್ದಿಕ್ ಮಂಜೇಶ್ವರ, ಶಹಾದ್, ಶಾನವಾಜ್, ಇರ್ಷಾದ್ ಮೊಗ್ರಾಲ್ ನೇತೃತ್ವ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು