News Karnataka Kannada
Thursday, April 25 2024
Cricket
ಕರ್ನಾಟಕ

ಜನಸಂದಣಿಯಾಗದಂತೆ ಸರಳ ಬಕ್ರೀದ್ ಆಚರಣೆಗೆ ಉ.ಕನ್ನಡ ಜಿಲ್ಲಾಧಿಕಾರಿ ಸೂಚನೆ

Photo Credit :

ಜನಸಂದಣಿಯಾಗದಂತೆ ಸರಳ ಬಕ್ರೀದ್ ಆಚರಣೆಗೆ ಉ.ಕನ್ನಡ ಜಿಲ್ಲಾಧಿಕಾರಿ ಸೂಚನೆ

ಕಾರವಾರ: ಕೊರೊನಾದಂತಹ ಸಾಂಕ್ರಾಮಿಕ ರೋಗದ ಸಂದಿಗ್ಧ ಪರಿಸ್ಥಿತಿಯಲ್ಲಿ ಆಚರಿಸಲಾಗುತ್ತಿರುವ ಬಕ್ರೀದ್ ಹಬ್ಬವನ್ನು ಅತ್ಯಂತ ಮುಂಜಾಗ್ರತೆಯಿಂದ ಆಚರಣೆ ಮಾಡುವ ಮೂಲಕ ಸಮಾಜದ ಆರೋಗ್ಯ ಕಾಪಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ಸೂಚನೆ ನೀಡಿದರು.

ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರರು ಹಾಗೂ ಪೊಲೀಸ್ ಅಧಿಕಾರಿ ಮತ್ತು ಮುಸ್ಲಿಂ ಹಾಗೂ ಹಿಂದು ಮುಖಂಡರೊಂದಿಗೆ ಶಾಂತಿಪಾಲನಾ ಸಭೆ ನಡೆಸಿ ಮಾತನಾಡಿ, ಧಾರ್ಮಿಕ ಹಬ್ಬಗಳನ್ನು ಆಚರಿಸುವುದು ಜನರ ಹಕ್ಕು ಮತ್ತು ಅಷ್ಟೆ ಸಾಮಾಜಿಕ ಜವಾಬ್ದಾರಿಯೂ ಇದೆ.

ಕೋವಿಡ್-19ನಂತಹ ವಿಷಮ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಪ್ರತಿಭಟನೆಯನ್ನು ನಡೆಸಲು ಮುಂದಾದಲ್ಲಿ ಯಾವುದೇ ಕಾರಣಕ್ಕೂ ಸಹಿಸದೇ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧಾರ್ಮಿಕ ಹಬ್ಬವನ್ನು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕೈಗೊಂಡು ಆಚರಿಸತಕ್ಕದ್ದು, ಆಯಾ ಮಸೀದಿಗಳಲ್ಲಿ ಗರಿಷ್ಟ 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದಾಗಿದೆ. ಒಂದು ವೇಳೆ ಅಧಿಕ ಜನರು ಆಗಮಿಸಿದ್ದಲ್ಲಿ 2 ಅಥವಾ 3 ಬ್ಯಾಚ್‍ನಂತೆ ಆಯಾ ಮಸೀದಿಗಳಲ್ಲಿ ನಮಾಜ್ ನಿರ್ವಹಿಸಲು ಸರ್ಕಾರ ನಿರ್ದೇಶನ ನೀಡಿದ್ದು, ಸರ್ಕಾರದ ಈ ಆದೇಶ ಪಾಲನೆ ಆಗಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು