News Karnataka Kannada
Tuesday, April 16 2024
Cricket
ಕರ್ನಾಟಕ

ಜಿಂದಾಲ್ ತಾತ್ಕಾಲಿಕ ಆಸ್ಪತ್ರೆಯ 300 ಆಕ್ಸಿಜನ್ ಬೆಡ್ ಇನ್ನೂ 4 ದಿನಗಳಲ್ಲಿ ರೆಡಿ

Photo Credit :

ಜಿಂದಾಲ್ ತಾತ್ಕಾಲಿಕ ಆಸ್ಪತ್ರೆಯ 300 ಆಕ್ಸಿಜನ್ ಬೆಡ್ ಇನ್ನೂ 4 ದಿನಗಳಲ್ಲಿ ರೆಡಿ

ಬಳ್ಳಾರಿ: ಜಿಲ್ಲೆಯಲ್ಲಿ ಹೋಂ ಐಸೋಲೇಶನ್‍ನಲ್ಲಿರುವ ಸೊಂಕಿತರು ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದಿರುವ ಕಾರಣ ಅವರನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ,ಹಜ್ ಮತ್ತು ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 

 

ಹೋಂ ಐಸೋಲೇಶನ್‍ನಲ್ಲಿರುವ ಸೊಂಕಿತರು ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ; ಜಿಲ್ಲಾಡಳಿತ ನೇಮಿಸಿದ ತಂಡಗಳು ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಮಾತ್ರ ಮನೆಯಲ್ಲಿರುತ್ತಿದ್ದಾರೆ. ನಂತರ ಹೊರಗಡೆ ಅನಗತ್ಯ ತಿರುಗಾಟ ಹಾಗೂ ಇನ್ನೀತರರಿಗೆ ಸೊಂಕು ಪಸರಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೊಂಕು ನಿಯಂತ್ರಣಕ್ಕೆ ಬರುವುದರ ಬದಲಿಗೆ ಹೆಚ್ಚಿನ ಸೊಂಕಿನ ಪ್ರಕರಣಗಳು ದೃಢಪಡುವಂತಾಗಿದೆ. ಜಿಲ್ಲಾಡಳಿತ ಅನೇಕ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡರೂ ಸಹ ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.

 

ಜಿಲ್ಲೆಯಲ್ಲಿ 14 ಸಾವಿರ ಜನರು ಹೋಂ ಐಸೋಲೇಶನ್‍ನಲ್ಲಿದ್ದು, ಮೊದಲಿಗೆ ಅತಿಹೆಚ್ಚಿನ ಸೊಂಕು ಪ್ರಕರಣಗಳು ವರದಿಯಾಗಿರುವ ಪ್ರದೇಶಗಳಲ್ಲಿನ ಹೋಂ ಐಸೋಲೇಶನ್ ಸೊಂಕಿತರನ್ನು ಮೊದಲ ಆದ್ಯತೆ ಮೇರೆಗೆ ಈಗಾಗಲೇ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್‍ಗಳಿಗೆ ಪೊಲೀಸ್ ಸಿಬ್ಬಂದಿಯ ಸಹಕಾರದೊಂದಿಗೆ ಶಿಫ್ಟ್ ಮಾಡಲಾಗುವುದು ಎಂದರು. 

 

ಈಗಾಗಲೇ ಜಿಲ್ಲಾಧಿಕಾರಿಗಳು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಪಂ ಸಿಇಒ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲೆಯ 11 ತಾಲೂಕುಗಳ ಪ್ರವಾಸ ಮಾಡಿ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಅಲ್ಲಿರುವ ಅವ್ಯವಸ್ಥೆಗಳನ್ನು ಸರಿಪಡಿಸಲಾಗಿದೆ ಎಂದು ವಿವರಿಸಿದ ಸಚಿವ ಸಿಂಗ್ ಅವರು ಎರಡು ದಿನಗಳ ಹಿಂದಷ್ಟೇ ನಗರದ ಬಿಡಿಎಎ ಫುಟ್ಬಾಲ್ ಮೈದಾನದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ತಜ್ಞರ ಸಭೆ ಕರೆದು ಸಲಹೆಗಳನ್ನು ಪಡೆದುಕೊಂಡು ಇಡೀ ಬಳ್ಳಾರಿ ಜಿಲ್ಲೆಯನ್ನು ಸಂಪೂರ್ಣ ಲಾಕ್‍ಡೌನ್ ಮಾಡಲಾಗಿದೆ ಎಂದರು.

 

ಜಿಂದಾಲ್ ಎದುರುಗಡೆ ನಿರ್ಮಾಣವಾಗುತ್ತಿರುವ 1 ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಕಾರ್ಯವನ್ನು ಈಗಷ್ಟೇ ಪರಿಶೀಲಿಸಿ ಬಂದಿದ್ದು, ಎಲೆಕ್ಟ್ರೀಕಲ್ ಕಾರ್ಯ ನಡೆಯುತ್ತಿದೆ.ಇನ್ನೂ ನಾಲ್ಕು ದಿನಗಳಲ್ಲಿ ಈ ಕಾರ್ಯ ಪೂರ್ಣಗೊಂಡು 300 ಆಕ್ಸಿಜನ್ ಬೆಡ್‍ಗಳೊಂದಿಗೆ ತಾತ್ಕಾಲಿಕ ಆಸ್ಪತ್ರೆ ಆರಂಭವಾಗಲಿದೆ. ಈಗಾಗಲೇ ತಜ್ಞವೈದ್ಯರು,ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಕ ಪ್ರಕ್ರಿಯೆ ಆರಂಭವಾಗಿದ್ದು,ಆದೇಶ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು