News Karnataka Kannada
Wednesday, April 24 2024
Cricket
ಕರ್ನಾಟಕ

ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಐಸಿಯು ಸ್ಥಾಪನೆಗೆ ಕ್ರಮ: ಜಿಲ್ಲಾಧಿಕಾರಿ

Photo Credit :

ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಐಸಿಯು ಸ್ಥಾಪನೆಗೆ ಕ್ರಮ: ಜಿಲ್ಲಾಧಿಕಾರಿ

ಕಾರವಾರ: ಜಿಲ್ಲೆಯ ಎಲ್ಲ ತಾಲೂಕಾ ಆಸ್ಪತ್ರೆಗಳಲ್ಲಿ ಐಸಿಯು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್.ಕೆ ತಿಳಿಸಿದ್ದಾರೆ.

ಈ ಬಗ್ಗೆ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರೊಂದಿಗೆ ಸಭೆಯನ್ನು ನಡೆಸಿ ಮಾತನಾಡಿದ ಅವರು  ಜಿಲ್ಲಾ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿನ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಉತ್ತಮ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು ಒಟ್ಟೂ ಸೋಂಕಿತರಲ್ಲಿ ಶೇ.75 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸುವುದು, ಪ್ರತಿ ಸೋಂಕಿತರ ಸಂಪರ್ಕಕ್ಕೆ ಬಂದವರನ್ನೆಲ್ಲ ಪರೀಕ್ಷೆಗೆ ಒಳಪಡಿಸಬೇಕು. ಉತ್ತಮ ಗುಣಮಟ್ಟದ ಚಿಕಿತ್ಸೆ ಕಲ್ಪಿಸುವುದರಿಂದ ಈ ಮಹಾ ಮಾರಿಯನ್ನು ಆದಷ್ಟು ಬೇಗ ನಿಯಂತ್ರಣಕ್ಕೆ ಪಡೆಯಬೇಕು ಎಂದರು.

ಆದ್ದರಿಂದ ಸರ್ಕಾರ ಕಾರವಾರ ವೈದ್ಯಕೀಯ ಕಾಲೇಜಿನಲ್ಲಿ ಸೋಂಕು ಪತ್ತೆ ಪರೀಕ್ಷೆಯ ಪ್ರಮಾಣ ಹೆಚ್ಚಿಸಲು ಇನ್ನೊಂದು ಹೊಸ ಯಂತ್ರವನ್ನು ಶೀಘ್ರ ಸರಕಾರ ಒದಗಿಸಲಿದೆ. ಈಗಾಗಲೇ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿಗಳ ಲಭ್ಯತೆ ಇದ್ದು, ಯಾವುದೇ ಕಾರಣಕ್ಕೂ ಔಷಧಿಗಳ ಹಾಗೂ ಆಮ್ಲಜನಕದ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಿದ ಜಿಲ್ಲಾಧಿಕಾರಿ ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಕಾಲ ಕಾಲಕ್ಕೆ ಪರಿಶೀಲನೆ ನಡೆಸುತ್ತಿರಬೇಕು ಎಂದು ತಿಳಿಸಿದರು.

ಐಸಿಯುನಲ್ಲಿರುವ ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡ ಕೂಡಲೇ ಅವರನ್ನು ಸಾಮಾನ್ಯ ವಾರ್ಡಗೆ ಸ್ಥಳಾಂತರಿಸಿ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಐಸಿಯು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆ ಭೌಗೋಳಿಕವಾಗಿ ಅತ್ಯಂತ ವಿಸ್ತಾರವಾಗಿರುವ ಜಿಲ್ಲೆಯಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ಸಕಾಲದಲ್ಲಿ ಜಿಲ್ಲಾ ಕೇಂದ್ರಕ್ಕೆ ಸ್ಥಳಾಂತರಿವುದು ಕಷ್ಟವಾಗುತ್ತಿರುವ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ತಾಲೂಕಾ ಆಸ್ಪತ್ರೆಗಳಲ್ಲಿ ಐಸಿಯು ಸ್ಥಾಪಿಸುವಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ತಾಲೂಕಾ ಆಸ್ಪತ್ರೆಗಳಲ್ಲಿ ದಾಖಲಾಗುವ ಕೊವಿಡ್ ಸೋಂಕಿತರ ಚಿಕಿತ್ಸೆಯ ಬಗ್ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರುಗಳೊಂದಿಗೆ ಕಾರವಾರ ವೈದ್ಯಕೀಯ  ಮಹಾ ವಿದ್ಯಾಲಯದ ತಜ್ಞ ವೈದ್ಯರುಗಳು  ವಿಡಿಯೋ ಸಂವಾದ ನಡೆಸಿ ಚಿಕಿತ್ಸೆಯ ಬಗ್ಗೆ ಸೂಕ್ತ ಮಾಹಿತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.

ಈ ಸಂದರ್ಭದಲ್ಲಿ ಕಾರವಾರ ವೈದ್ಯಕೀಯ ಮಹಾ ವಿದ್ಯಾಲಯದ ಡೀನ್ ಗಜಾನನ ನಾಯ್ಕ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್. ಕೆ, ಜಿಲ್ಲಾ ಆರೋಗ್ಯಾಧಿಕಾರಿ ಶರದ್ ನಾಯಕ ಹಾಗೂ ಇತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು