News Karnataka Kannada
Thursday, April 18 2024
Cricket
ಕರ್ನಾಟಕ

ತರಬೇತಿ ಕಾರ್ಯಕ್ರಮಗಳ ಕ್ರಿಯಾಯೋಜನೆ ಸಿದ್ಧ ಪಡಿಸಲು ಸೂಚನೆ

Photo Credit :

ತರಬೇತಿ ಕಾರ್ಯಕ್ರಮಗಳ ಕ್ರಿಯಾಯೋಜನೆ ಸಿದ್ಧ ಪಡಿಸಲು ಸೂಚನೆ

ಮಡಿಕೇರಿ: ವಿವಿಧ ಇಲಾಖೆಗಳೊಂದಿಗೆ ಸಮಾಲೋಚಿಸಿ 2020-21 ರ ಸಾಲಿನಲ್ಲಿ ಜಿಲ್ಲೆಯಲ್ಲಿ ಜಾರಿಗೊಳಿಸಬಹುದಾದ ತರಬೇತಿ ಕಾರ್ಯಕ್ರಮಗಳ ಕ್ರಿಯಾಯೋಜನೆ ಸಿದ್ದಪಡಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದ್ದಾರೆ.

ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ “ಅವಾರ್ಡ್ ಫಾರ್ ಎಕ್ಸಲೆನ್ಸ್ ಇನ್ ಡಿಸ್ಟ್ರಿಕ್ಟ್ ಸ್ಕಿಲ್ ಡೆವಲಪ್ ಮೆಂಟ್ ಪ್ಲಾನಿಂಗ್ 2020-21” ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾ ಕೌಶಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೌಶಲ್ಯ ತರಬೇತಿಗಳನ್ನು ಆಯೋಜಿಸುವ ತರಬೇತಿ ಸಂಸ್ಥೆಗಳು ನಿಯಮಾನುಸಾರ ಕೌಶಲ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ನೋಂದಾಯಿಸಿಕೊಂಡು ತರಬೇತಿ ಪ್ರಾರಂಭಿಸಬೇಕು ಎಂದರು.

ಅಲ್ಲದೆ ತರಬೇತಿ ಸಂಸ್ಥೆಗಳು ನಿರುದ್ಯೋಗ ಯುವಕ ಯುವತಿಯರಿಗೆ ಉತ್ತಮ ಗುಣಮಟ್ಟದ ವೃತ್ತಿಪರ ತರಬೇತಿ ನೀಡುವ ಜೊತೆಗೆ ಸೂಕ್ತ ಮೌಲ್ಯಮಾಪನ ನಡೆಸಿ ಮೌಲ್ಯಯುತವಾದ ಪ್ರಮಾಣ ಪತ್ರಗಳನ್ನು ವಿತರಿಸಬೇಕು ಎಂದು ಸಲಹೆ ನೀಡಿದರು.

ಕೂಡಿಗೆ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರಾದ ಡಾ.ಜಿ.ಎಸ್.ಸುರೇಶ್ ಅವರು ಮಾತನಾಡಿ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಆಯೋಜಿಸಲಾಗುವ ತರಬೇತಿ ಕಾರ್ಯಕ್ರಮಗಳನ್ನು ನಮ್ಮ ತರಬೇತಿ ಸಂಸ್ಥೆಯ ಮೂಲಕ ಅನುಷ್ಠಾನಗೊಳಿಸಲು ಸಮರ್ಥರಿರುವುದಾಗಿ ತಿಳಿಸಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ.ಎಂ.ಉಮಾ ಅವರು ಜೇನು ಕೃಷಿ, ಅಣಬೆ ಬೇಸಾಯ, ಜಿ.ಎಸ್.ಟಿ ಹಾಗೂ ಡಾಟಾ ಎಂಟ್ರಿ ತರಬೇತಿಯ ಜೊತೆಗೆ 2020-21 ರ ಸಾಲಿನಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭಿಸಬಹುದಾದ ಕೃಷಿ ಮತ್ತು ಕೃಷಿಯೇತರ ತರಬೇತಿ ಚಟುವಟಿಕೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

 ಸಹಾಯಕ ಸಾಂಖ್ಯಿಕ ಅಧಿಕಾರಿ ಡಾ.ರೂಪ ಎಚ್.ಜೆ, ಎಂ.ಜಿ.ಎನ್.ಎಫ್ ಸಂಶೋಧನಾರ್ಥಿ ವೀರೇಶ್ ಅಲ್ಲದ್ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು