News Karnataka Kannada
Wednesday, April 24 2024
Cricket
ಕರ್ನಾಟಕ

ತಲಕಾವೇರಿ ಗೊಂದಲ: ಶಾಸಕರ ಮಧ್ಯ ಪ್ರವೇಶಕ್ಕೆ ಎಂಎಲ್‍ಸಿ ವೀಣಾಚಯ್ಯ ಒತ್ತಾಯ

Photo Credit :

ತಲಕಾವೇರಿ ಗೊಂದಲ: ಶಾಸಕರ ಮಧ್ಯ ಪ್ರವೇಶಕ್ಕೆ ಎಂಎಲ್‍ಸಿ ವೀಣಾಚಯ್ಯ ಒತ್ತಾಯ

ಮಡಿಕೇರಿ: ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರದ ಬಗ್ಗೆ ಕಳೆದ ಒಂದು ತಿಂಗಳಿನಿಂದ ಗೊಂದಲಗಳು ಸೃಷ್ಟಿಯಾಗಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತಿವೆ. ಭಕ್ತರ ಮನಸ್ಸಿಗೆ ಘಾಸಿಯಾಗುವ ಹೇಳಿಕೆಗಳು ಕೇಳಿ ಬರುತ್ತಿದ್ದು, ಇದೊಂದು ಸೂಕ್ಷ್ಮ ವಿಚಾರವಾಗಿ ಮಾರ್ಪಟ್ಟಿರುವುದು ವಿಷಾದಕರವೆಂದು ಬೇಸರ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಜವಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲೆಯ ಇಬ್ಬರು ಶಾಸಕರು ಮಧ್ಯ ಪ್ರವೇಶ ಮಾಡಿ ಗೊಂದಲಗಳನ್ನು ನಿವಾರಿಸಬೇಕೆಂದು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡವರು ಹಾಗೂ ಅರೆಭಾಷೆ ಗೌಡರು ಬಹಳ ವರ್ಷಗಳ ಹಿಂದಿನಿಂದಲೂ ಅಣ್ಣ ತಮ್ಮಂದಿರಂತೆ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಆದರೆ ಇತ್ತೀಚೆಗೆ ತಲಕಾವೇರಿ ಕ್ಷೇತ್ರದ ವಿಚಾರದಲ್ಲಿ ಕೆಲವರಲ್ಲಿ ಭಿನ್ನಾಭಿಪ್ರಾಯಗಳು ಮೂಡಿ ಗೊಂದಲ ಸೃಷ್ಟಿಯಾಗಿರುವುದು ಬೇಸರದ ವಿಚಾರವಾಗಿದೆ ಎಂದರು.

ಕಾವೇರಿಮಾತೆ ತೀರ್ಥರೂಪಿಣಿಯಾಗಿ ಪ್ರತ್ಯಕ್ಷಳಾಗುವ ಕಾವೇರಿ ತುಲಾಸಂಕ್ರಮಣದ ಒಂದು ತಿಂಗಳ ಕಾಲ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ವಿವಿಧ ಸಾಂಪ್ರದಾಯಿಕ ಆಚರಣೆಗಳು ನಡೆಯುತ್ತವೆ. ಇದು ಈ ಹಿಂದಿನಂತೆ ಮುಂದುವರೆಯಬೇಕು ಎನ್ನುವುದು ನಮ್ಮ ಅಪೇಕ್ಷೆ. ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ನಿಧನದ ನಂತರ ಕೇತ್ರದ ಪೂಜಾ, ವಿಧಿವಿಧಾನಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದೆ. ಪರ, ವಿರೋಧ ಗುಂಪುಗಳು ಆರೋಪ, ಪ್ರತ್ಯಾರೋಪದಲ್ಲಿ ತೊಡಗಿಕೊಂಡ ಕಾರಣ ಭಕ್ತರಲ್ಲಿ ಗೊಂದಲದ ವಾತಾವರಣ ಮೂಡಿದೆ. ಇದೆಲ್ಲವೂ ನಿವಾರಣೆಯಾಗಬೇಕಾದರೆ ಕೊಡವ ಮತ್ತು ಗೌಡ ಸಮುದಾಯದ ಶಾಸಕರುಗಳಾದ ಎಂ.ಪಿ.ಅಪ್ಪಚ್ಚುರಂಜನ್ ಹಾಗೂ ಕೆ.ಜಿ.ಬೋಪಯ್ಯ ಅವರುಗಳು ಮಧ್ಯ ಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕಾಗಿದೆ. ಎಲ್ಲಾ ಜನಾಂಗದ ಸಭೆ ಕರೆದು ಸಾಂಪ್ರದಾಯಿಕ ಆಚರಣೆಗಳು ಪ್ರತಿವರ್ಷ ಹೇಗೆ ನಡೆದುಕೊಂಡು ಬರಬೇಕು ಮತ್ತು ಕ್ಷೇತ್ರದ ಪಾವಿತ್ರ್ಯತೆಯನ್ನು ಹೇಗೆ ಉಳಿಸಿಕೊಂಡು ಹೋಗಬೇಕು ಎನ್ನುವ ಬಗ್ಗೆ ಸೂತ್ರಗಳನ್ನು ಸಿದ್ಧಪಡಿಸಬೇಕು ಎಂದು ವೀಣಾಅಚ್ಚಯ್ಯ ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು