News Karnataka Kannada
Wednesday, April 24 2024
Cricket
ಕರ್ನಾಟಕ

ತಿ.ನರಸೀಪುರದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ

Photo Credit :

ತಿ.ನರಸೀಪುರದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ

ತಿ.ನರಸೀಪುರ: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ತಾತ್ಕಾಲಿಕವಾಗಿ ತೆರೆದಿರುವ ಕೋವಿಡ್ ಕೇರ್ ಸೆಂಟರ್ ಅತ್ಯುತ್ತಮ ಸೌಲಭ್ಯಗಳೊಂದಿಗೆ ಮಾದರಿಯಾಗಿರಬೇಕೆಂದು ಶಾಸಕ ಎಂ.ಅಶ್ವಿನ್ ಕುಮಾರ್ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ತಾಲೂಕಿನ ಕೊಡ್ಲೂರು ಗ್ರಾಮದ ಬಳಿಯಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ತೆರೆದಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಪರಿಶೀಲನೆ ಮಾಡಿದ ನಂತರ ಮಾತನಾಡಿ, ಕೊರೋನಾ ಲಕ್ಷಣಗಳು ಕಾಣಿಸಿಕೊಳ್ಳದ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವುದರಿಂದ ಇವರ ಚಿಕಿತ್ಸೆಗಾಗಿಯೇ ಪ್ರತ್ಯೇಕವಾಗಿ `ಕೋವಿಡ್ ಕೇರ್ ಸೆಂಟರ್’ ಸ್ಥಾಪಿಸಲಾಗಿದ್ದು ಇಲ್ಲಿ ಮೊದಲ ಗುಣ ಲಕ್ಷಣಗಳು ಕಾಣಿಸಿಕೊಂಡವರಿಗೆ ಪ್ರಥಮ ಹಂತದಲ್ಲಿ ಮೈಸೂರು ಕೋವಿಡ್ ಆಸ್ಪತ್ರೆಯಲ್ಲಿ ನೀಡುವ ಚಿಕಿತ್ಸೆಯನ್ನೇ ಜಿಲ್ಲಾ ವೈದ್ಯರ ಮಾರ್ಗದರ್ಶನದಲ್ಲಿ ನೀಡಲಾಗುತ್ತದೆ ಇದರಿಂದ ಕೋವಿಡ್ ವಿಚಾರವಾಗಿ ಎಲ್ಲದಕ್ಕೂ ಜಿಲ್ಲಾ ಮಟ್ಟಕ್ಕೆ ಹೋಗುವುದು ತಪ್ಪುತ್ತದೆ ಎಂದರು.

ಕೋವಿಡ್ ಕೇರ್ ಸೆಂಟರ್ ನಲ್ಲಿ ಯಾವುದೇ ರೀತಿಯ ದೂರು ಬರದಂತೆ ಅಗತ್ಯಕ್ಕೂ ಮೀರಿದ ಸೌಲಭ್ಯಗಳನ್ನು ಅಳವಡಿಸಲು ಸೂಚನೆ ನೀಡಿದ್ದೇನೆ ಹಾಗೂ ಜಿಲ್ಲೆಯಲ್ಲಿಯೇ ತಿ.ನರಸೀಪುರ ಕೋವಿಡ್ ಕೇರ್ ಸೆಂಟರ್ ಮಾದರಿಯಾಗಿರಬೇಕೆಂದು ಬಯಸಿದ್ದೇನೆ ಆ ಒಂದು ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ ಎಂಬ ಭರವಸೆಯಿದೆ ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಡಿ.ನಾಗೇಶ್, ಪಿ.ಎಸ್.ಐ. ಬಸವರಾಜು, ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು