News Karnataka Kannada
Saturday, April 13 2024
Cricket
ಕರ್ನಾಟಕ

ದುರ್ನಾತ ಬೀರುವ ಕೆ.ಆರ್.ಪೇಟೆ ಬಸ್ ನಿಲ್ದಾಣ

Photo Credit :

ದುರ್ನಾತ ಬೀರುವ ಕೆ.ಆರ್.ಪೇಟೆ ಬಸ್ ನಿಲ್ದಾಣ

ಕೆ.ಆರ್.ಪೇಟೆ:  ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವು ಅಭಿವೃದ್ದಿ ಕಾಣದೆ ಪ್ರಯಾಣಿಕರಿಗೆ ರೋಗ ಹರಡುವ ಸ್ಥಳವಾಗಿ ಮಾರ್ಪಟ್ಟಿರುವುದು ಆತಂಕಕಾರಿಯಾಗಿದೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಅವರ ಸ್ವಕ್ಷೇತ್ರವಾಗಿರುವ ಕೆ.ಆರ್.ಪೇಟೆ ಪಟ್ಟಣದ ಬಸ್ ನಿಲ್ದಾಣದ ಸುತ್ತಲೂ ಇರುವ ಚರಂಡಿ ಸ್ವಚ್ಛತೆ ಇಲ್ಲದೇ ಚರಂಡಿಯಲ್ಲಿ ಗಿಡಗಂಟಿಗಳು ಬೆಳೆದುಕೊಂಡು  ಕೊಳಚೆ ನೀರು ನಿಂತಲ್ಲೆ  ನಿಂತು ಕೊಳೆತು ಗಬ್ಬೆದ್ದು ನಾರುತ್ತಿದೆ. ಇದು  ಇಡೀ ಬಸ್ ನಿಲ್ದಾಣಕ್ಕೆ ದುರ್ವಾಸನೆಯನ್ನು ಉಚಿತವಾಗಿ ನೀಡುತ್ತಿದೆ. ಇದರಿಂದಾಗಿ ಪ್ರಯಾಣಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೆಚ್ಚಾಗಿದೆ.

ಚರಂಡಿ ಸ್ವಚ್ಛತೆಗೆ ಮಾಸಿಕ ಲಕ್ಷಾಂತರ ರೂ ಖರ್ಚು ಮಾಡುವ ಅವಕಾಶವಿದ್ದರೂ ಕೆ.ಆರ್.ಪೇಟೆ ಬಸ್ ಡಿಪೋ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಸ್ ನಿಲ್ದಾಣವು ಕೊಳಚೆ ನೀರು ನಿಲ್ಲುವ ಸ್ಥಳವಾಗಿ ಮಾರ್ಪಟ್ಟಿದೆ. ಕಳೆದ 6 ತಿಂಗಳಿಂದ ಲಾಕ್ ಡೌನ್ ಹಿನ್ನೆಲೆಯಲ್ಲಿ ಖಾಲಿ ಇರುವ ಬಸ್ ನಿಲ್ದಾಣದ ಚರಂಡಿಗಳನ್ನು  ಜೆಸಿಬಿ ಬಳಸಿ  ಸ್ವಚ್ಛಗೊಳಿಸುವ ಕೆಲಸ ಮಾಡದೇ ಬಸ್ ನಿಲ್ದಾಣಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿರುವ ಡಿಪೋ  ಅಧಿಕಾರಿಗಳನ್ನು ಕೇಳುವವರು, ಹೇಳುವವರು ಯಾರೂ ಇಲ್ಲದಂತಾಗಿದೆ. ಬಸ್ ನಿಲ್ದಾಣದ ಚರಂಡಿ ಸ್ವಚ್ಛತೆಗೆ ತಿಂಗಳಿಗೆ  ಲಕ್ಷಾಂತರ ರೂ ಬಳಕೆ ಮಾಡಿರುವ ಬಗ್ಗೆ ಲೆಕ್ಕ ಬರೆದು ಚರಂಡಿ ಸ್ವಚ್ಛಗೊಳಿಸದೇ ಸುಮ್ಮನೆ ಕಾಲಹರಣ ಮಾಡುತ್ತಿರುವ ಡಿಪೋ ಅಧಿಕಾರಿಗಳು ಪ್ರಯಾಣಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು  ಸಾರ್ವಜನಿಕರು ಆರೋಪಿಸಿದ್ದಾರೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ಸ್ವಕ್ಷೇತ್ರದ ಬಸ್ ನಿಲ್ದಾಣವು ಗಬ್ಬೆದ್ದು ನಾರುತ್ತಿದ್ದರೂ ಕೆ.ಎಸ್.ಆರ್.ಟಿ.ಸಿ ಇಲಾಖೆಯ ಮೇಲಾಧಿಕಾರಿಗಳು ಇತ್ತ ಗಮನ ಹರಿಸಿ ಬಸ್ ನಿಲ್ದಾಣದ ಸ್ವಚ್ಛತೆಗೆ ಸೂಚನೆ ನೀಡದೆ ಇರುದೇಕೆ ಎಂಬ ಪ್ರಶ್ನೆಯನ್ನು ಜನ ಕೇಳುತ್ತಿದ್ದಾರೆ. ಇನ್ನಾದರೂ ಸಂಬಂಧಿಸಿದವರು ಇತ್ತ ಗಮನಹರಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು