News Karnataka Kannada
Monday, April 22 2024
Cricket
ಕರ್ನಾಟಕ

ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

Photo Credit :

ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ  ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

ಮಂಡ್ಯ: ಕಳೆದ ಹಲವು ತಿಂಗಳಿನಿಂದ ಜಾನುವಾರುಗಳನ್ನು ಕೊಂದು ತಿನ್ನುವ ಮೂಲಕ ಜನತೆಯ ನಿದ್ದೆಗೆಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ಸೆರೆಯಾಗಿರುವುದರಿಂದ ಜನರಲ್ಲಿದ್ದ ಆತಂಕ ದೂರವಾದಂತಾಗಿದೆ.

ದೊಡ್ಡಸೋಮನಹಳ್ಳಿ ರೈತ ಉಮೇಶ್ ಸೇರಿದಂತೆ ಹಲವು ರೈತರ ಸಾಕು ನಾಯಿಗಳು, ಹಸು ಮತ್ತು ಎಮ್ಮೆ ಕರುಗಳ ಮೇಲೆ ಚಿರತೆ ದಾಳಿ ಮಾಡಿ ಕೊಂದು ತಿನ್ನುವ ಮೂಲಕ ಈ ಭಾಗದಲ್ಲಿ ರೈತರಲ್ಲಿ ಆತಂಕ ಮೂಡಿಸಿತ್ತು. ಹೀಗಾಗಿ ರೈತರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರು.

ಈ ದೂರಿನ ಮೇರೆಗೆ ಸಂತೇಬಾಚಹಳ್ಳಿ ಹೋಬಳಿಯ ಅರಣ್ಯಾಧಿಕಾರಿ ಭರತ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡವು ದೊಡ್ಡಸೋಮನಹಳ್ಳಿ ಗ್ರಾಮದ ರೈತ ಉಮೇಶ್ ಎಂಬುವವರ ಜಮೀನಿನ ಬಳಿ ಬೋನಿಟ್ಟು ಕಾರ್ಯಾಚರಣೆ ನಡೆಸಿದ್ದರು. ಬೋನಿನಲ್ಲಿದ್ದ ನಾಯಿ ತಿನ್ನಲು ಬಂದ ಚಿರತೆಯು ಬೋನಿನಲ್ಲಿ ಸೆರೆಯಾಗಿದೆ ಇದರಿಂದ ಈ ಭಾಗದ ರೈತರಲ್ಲಿ ಮನೆಮಾಡಿದ್ದ ಆತಂಕವು ದೂರವಾದಂತಾಗಿದೆ. ಸೆರೆ ಸಿಕ್ಕ ಚಿರತೆಗೆ ಸೂಕ್ತ ಚಿಕಿತ್ಸೆ ಕೊಡಿಸಿ, ಮುತ್ತತ್ತಿ ಬಳಿಯ ಕಾವೇರಿ ವನ್ಯಧಾಮಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು