News Karnataka Kannada
Sunday, April 14 2024
Cricket
ಕರ್ನಾಟಕ

ನಾಳೆಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

Photo Credit :

ನಾಳೆಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಚಾಮರಾಜನಗರ: ಶ್ರಾವಣ ಮಾಸದ ಎಣ್ಣೆ ಮಜ್ಜನ ಮತ್ತು ಭೀಮನ ಅಮವಾಸ್ಯೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ಪ್ರತಿವರ್ಷವೂ ಲಕ್ಷಾಂತರ ಭಕ್ತರು ಆಗಮಿಸಿ ಪೂಜೆ ಸಲ್ಲಿಸುತ್ತಿದ್ದರು. ಆದರೆ ಈ ಬಾರಿ ಕೊರೋನಾ ಹಿನ್ನಲೆಯಲ್ಲಿ ಜು.19 ರಿಂದ 21ರವರಗೆ ಮೂರು ದಿನಗಳ ಕಾಲ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದ್ದಾರೆ.

 

ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಜುಲೈ 19 ರಿಂದ 20ರ ಭಾನುವಾರ ಮತ್ತು ಸೋಮವಾರ ಶ್ರೀ ಮಲೆ ಮಹದೇಶ್ವರ ಸ್ವಾಮಿಯವರಿಗೆ ಎಣ್ಣೆ ಮಜ್ಜನ ಮತ್ತು ಭೀಮನ ಅಮಾವಾಸ್ಯೆಯ ವಿಶೇಷ ಪೂಜೆಗಳು ನಡೆಯಲಿದೆ. ಪ್ರತಿ ವರ್ಷದಂತೆ ಶ್ರಾವಣ ಮಾಸದ ಪ್ರಯುಕ್ತ ಜುಲೈ 21ರಂದು ಮಂಗಳವಾರ ಶ್ರೀ ಸ್ವಾಮಿಗೆ 108 ಕುಂಭಾಭಿಷೇಕ, ಸಹಸ್ರ ಅಭಿಷೇಕ ಪೂಜೆಗಳು ನಡೆಯುತ್ತವೆ. ಈ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಸಂಭವ ಇದೆ. ಕೋವಿಡ್-19 ವಿರುದ್ಧ ರಕ್ಷಣಾ ಕ್ರಮಗಳನ್ನು ಕೈಗೊಂಡರೂ ಸಹ ಭಕ್ತರನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಿ ದೇವರ ದರ್ಶನ ಮಾಡಿಸಲು ಕಷ್ಟಸಾಧ್ಯವಾಗಲಿದೆ.

 

ಈ ಹಿನ್ನೆಲೆಯಲ್ಲಿ ಜುಲೈ 19 ರಿಂದ 21ರವರೆಗೆ ಪೂಜೆಗಳನ್ನು ಧಾರ್ಮಿಕ ವಿಧಿವಿಧಾನಗಳಲ್ಲಿ ಶಾಸ್ತ್ರೋಕ್ತವಾಗಿ ದೇವಸ್ಥಾನದ ಒಳ ಆವರಣದಲ್ಲಿ ಕೈಗೊಳ್ಳಲು ಹಾಗೂ ಸರ್ಕಾರಿ ಕೆಲಸದ ನಿಮಿತ್ತ ಬರುವ ಅಧಿಕಾರಿಗಳು ಮತ್ತು ಜನಪ್ರತಿಧಿಗಳನ್ನು ಹೊರತುಪಡಿಸಿ. ಸಾರ್ವಜನಿಕರು ಹಾಗೂ ಭಕ್ತಾಧಿಗಳಿಗೆ ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಾಲಯ ಹಾಗೂ ಪ್ರಾಧಿಕಾರದ ಆವರಣದಲ್ಲಿ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು