News Karnataka Kannada
Sunday, April 21 2024
Cricket
ಕರ್ನಾಟಕ

ನೈಸರ್ಗಿಕ ವಿಕೋಪದಿಂದ ಹಾನಿಯಾದರೆ 24 ತಾಸಿನೊಳಗೆ ಪರಿಹಾರ ನೀಡಿ: ಡಿಸಿ ಹರೀಶಕುಮಾರ

Photo Credit :

ನೈಸರ್ಗಿಕ ವಿಕೋಪದಿಂದ ಹಾನಿಯಾದರೆ 24 ತಾಸಿನೊಳಗೆ ಪರಿಹಾರ ನೀಡಿ: ಡಿಸಿ ಹರೀಶಕುಮಾರ

ಕಾರವಾರ:ನೈಸರ್ಗಿಕ ವಿಕೋಪದಿಂದ ಉಂಟಾಗುವ ಹಾನಿಗಳಿಗೆ 24 ಗಂಟೆಯೊಳಗೆ ಪರಿಹಾರ ವಿತರಿಸಬೇಕು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದ್ದು, ಜಿಲ್ಲೆಯ ಎ¯್ಲ ನದಿಕೊಳ್ಳಗಳು ತುಂಬಿ ಹರಿಯುತ್ತಿರುವದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಇರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಕಂದಾಯ, ಲೋಕೋಪಯೋಗಿ, ಪಂಚಾಯತರಾಜ್ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆಯನ್ನು ನಡೆಸಿದರು.

 

ಈಗಾಗಲೇ ಜಿಲ್ಲೆಯಾದ್ಯಂತ ಭಾರಿ ಗಾಳಿಯೊಂದಿಗೆ ತೀವ್ರ ಮಳೆಯಾಗುತ್ತಿದ್ದು, ಹೊನ್ನಾವರ ತಾಲೂಕಿನಲ್ಲಿ ಕೆಲವು ಕಾಳಜಿ ಕೇಂದ್ರ ತೆರೆಯಲಾಗಿದೆ. ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿರುವ ಹಿನ್ನಲೆಯಲ್ಲಿ ಈ ಹಿಂದೆ ಗುರುತಿಸಲಾಗಿರುವ ಕಾಳಜಿ ಕೇಂದ್ರಗಳನ್ನು ಸರಕಾರದ ಮಾರ್ಗಸೂಚಿಯಂತೆ ಸಿದ್ದಪಡಿಸಲು ಹಾಗೂ ಹಾಲಿ ಕೊವಿಡ್ ಪರಿಸ್ಥಿತಿ ಇರುವದರಿಂದ ಕೊವಿಡ್-19 ಮಾರ್ಗಸೂಚಿಯಂತೆ ಕಾಳಜಿ ಕೇಂದ್ರದಲ್ಲಿ ಸೂಕ್ತ ಮುನ್ನೆಚ್ಚರಿಕೆಯನ್ನು ವಹಿಸುವಂತೆ ಜಿಲ್ಲಾಧಿಕಾರಿಗಳು ಎಲ್ಲ ತಹಸೀಲ್ದಾರರಿಗೆ ಸೂಚಿಸಿದರು.

 

ಈ ಹಿಂದಿನ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಉಂಟಾಗಿದ್ದ ಭಾರಿ ಪ್ರವಾಹವನ್ನು ಸಮರ್ಥವಾಗಿ ಎದುರಿಸಿ ಸೂಕ್ತ ಪರಿಹಾರ ಕಾರ್ಯಗಳನ್ನು ತೆಗೆದುಕೊಂಡಿರುವ ಸಾಕಷ್ಟು ಅನುಭವ ಅಧಿಕಾರಿಗಳಿಗೆ ಇರುವದರಿಂದ ಈ ಬಾರಿ ಎಲ್ಲಾ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದರು. ಪ್ರಕೃತಿ ವಿಕೋಪದಿಂದ ಉಂಟಾಗುವ ಹಾನಿಗಳಿಗೆ ಎನ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಸೂಕ್ತ ಪರಿಹಾರವನ್ನು 24 ಗಂಟೆಯ ಒಳಗೆ ಗರಿಷ್ಟ 48 ಗಂಟೆಗಳ ಒಳಗೆ ಸಂತ್ರಸ್ಥರಿಗೆ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಯಾವುದೇ ರೀತಿಯ ಸಕಾರಣವಿಲ್ಲದ ವಿಳಂಬಕ್ಕೆ ಸಂಬಂದಿಸಿದ ತಹಸೀಲ್ದಾರರನ್ನು ಹೊಣೆಗಾರರನ್ನಾಗಿ ಮಾಡಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆಯನ್ನು ನೀಡಿದರು.

 

ಪ್ರಸ್ತುತ ಜಿಲ್ಲೆಯಲ್ಲಿ ಭಾರಿ ಗಾಳಿಯೊಂದಿಗೆ ಮಳೆಯಾಗುತ್ತಿರುವದರಿಂದ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳುತ್ತಿದೆ. ಇದನ್ನು ಕೂಡಲೇ ತೆರವೊಗೊಳಿಸಲು ಲೋಕೋಪಯೋಗಿ ಅರಣ್ಯ, ಹಾಗೂ ಹೆಸ್ಕಾಂ ಇಲಾಖೆಯ ಜಂಟಿ ಮೊಬೈಲ್ ತಂಡವನ್ನು ರಚಿಸಿ, ಮರಗಳನ್ನು ಹಾಗೂ ವಿದ್ಯುತ್ ಕಂಬಗಳನ್ನು ಕೂಡಲೇ ತೆರವುಗೊಳಿಸಿ ಜಿಲ್ಲೆಯ ಯಾವುದೇ ಭಾಗದಲ್ಲಿ ಸಂಚಾರ ವ್ಯತ್ಯಯವಾಗದಂತೆ ಕ್ರಮ ಕೈಗೊಳಳು ಸೂಚಿಸಿದರು.

 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ. ಎಚ್. ಕೆ, ಸಹಾಯಕ ಆಯುಕ್ಷೆ ಪ್ರೀಯಾಂಗ ಎಂ, ಪಂಚಾಯುತರಾಜ್ ಎಂಜಿನಿರಿಂಗ್ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಡಿ. ಆರ್. ನಾಯ್ಕ ಹಾಗೂ ವಿಡಿಯೋ ಸಂವಾದದ ಮೂಲಕ ಜಿಲ್ಲೆಯ ಎಲ್ಲಾ ಸಹಾಯಕ ಆಯುಕ್ತರು ಹಾಗೂ ತಹಸೀಲ್ದಾರರು ಹಾಗೂ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು