News Karnataka Kannada
Saturday, April 13 2024
Cricket
ಕರ್ನಾಟಕ

ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪ

Photo Credit :

ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕಾಮಗಾರಿಯ  ಗುಣಮಟ್ಟ ಕಾಯ್ದುಕೊಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪ

ಗದಗ: ಗದಗ ತಾಲ್ಲೂಕಿನ ನಾಗಾವಿ, ಮಲ್ಲಸಮುದ್ರ ಹಾಗೂ ಕಳಸಾಪುರ ಗ್ರಾಮಗಳ ಜಮೀನಿನಲ್ಲಿ ನಿರ್ಮಾಣ ಹಂತದಲ್ಲಿರುವÀ ರಾಜ್ಯ ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಮಂಜೂರಾಗಿರುವ ಕಟ್ಟಡ ಕಾಮಗಾರಿ ಸ್ಥಳಕ್ಕೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

  ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಆದಷ್ಟು ಶೀಘ್ರ ಕಾಮಗಾರಿ ಮುಕ್ತಾಯಗೊಳಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು. ವಿಶ್ವವಿದ್ಯಾಲಯದ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರವಿದೆ ಎಂದರು.

 

ಇದೇ ವೇಳೆ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಾಬರಮತಿ ಆಶ್ರಮದ ಕಾಮಗಾರಿಯನ್ನು ವೀಕ್ಷಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಶಾಸಕರಾದ ರಾಮಣ್ಣ ಲಮಾಣಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಆಯುಕ್ತರಾದ ಪ್ರಿಯಾಂಕಾ ಮೇರಿ ಪ್ರಾನ್ಸಿಸ್, ಸಿಇಒ ಡಾ.ಆನಂದ್ ಕೆ., ಜಿ.ಪಂ.ಉಪ ಕಾರ್ಯದರ್ಶಿ ಕಲ್ಲೇಶ್, ಕುಲಪತಿ ವಿಷ್ಣುಕಾಂತ್ ಚಟಪಲ್ಲಿ ಹಾಗೂ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು