News Karnataka Kannada
Saturday, April 13 2024
Cricket
ಕರ್ನಾಟಕ

ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಕರೆ ನೀಡಿದ ಪರಿಸರ ಇಲಾಖೆ

Photo Credit :

ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಕರೆ ನೀಡಿದ ಪರಿಸರ ಇಲಾಖೆ

ಕಾರವಾರ:ಗಣೇಶ ಹಬ್ಬವನ್ನು ನಾಗರಿಕರು ಪರಿಸರ ಸ್ನೇಹಿಯಾಗಿ ಆಚರಿಸಬೇಕೆಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉತ್ತರ ಕನ್ನಡ ಜಿಲ್ಲಾ ಪರಿಸರ ಅಧಿಕಾರಿ ತಿಳಿಸಿದ್ದಾರೆ.

ಪ್ರತಿ ವರ್ಷ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಬಾರಿ ಕೊರೋನಾ ಸನ್ನಿವೇಶಕ್ಕೆ ಸಿಲುಕಿರುವದರಿಂದ ಅರಿಶಿನದಿಂದ ಗಣೇಶನ ಮೂರ್ತಿ ಮಾಡುವ ಕುರಿತು ಮಂಡಳಿಯು ಜಾಗೃತಿ ಮೂಡಿಸುತ್ತಿದೆ. ಕೊರೋನಾ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಪರಿಸರ ಸ್ನೇಹಿ ಜತೆಗೆ ಆರೋಗ್ಯ ಸ್ನೇಹಿ ಗಣೇಶೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು.

ಹಬ್ಬದ ದಿನ ಜನ ದಟ್ಟಣೆ ಹಾಗೂ ಸಾಮಾಜಿಕ ಅಂತರ ಕಾಪಾಡಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದಾಗಿದೆ. ಆ. 22 ರಂದು ಗಣೇಶ ಚತುರ್ಥಿ ಇದ್ದು, ಈ ಬಾರಿ ವೈರಾಣು ನಿರೋಧಕ ಶಕ್ತಿ ಹೊಂದಿರುವ ಅರಿಶಿನ ಗಣೇಶ ಮೂರ್ತಿಯನ್ನು ಮನೆಯಲ್ಲೇ ತಯಾರಿಸಿ ಪೂಜಿಸಲು ಹಾಗೂ ಅದನ್ನು ಮನೆಯಲ್ಲೇ ವಿಸರ್ಜಿಸುವಂತೆ ಮಂಡಳಿಯು ಜಾಗೃತಿ ಮೂಡಿಸುತ್ತಿದೆ.

 

ಅರಿಶಿನ ಗಣಪತಿ ಮಾಡುವ ವಿಧಾನ : ಮೊದಲು ಅರಿಶಿನ ಹಾಗೂ ಮೈದಾಹಿಟ್ಟಿಗೆ ನೀರು ಮಿಶ್ರಣ ಮಾಡಿ ಹದವಾಗಿ ಮಾಡಿಕೊಂಡು ಗಣೇಶನ ಆಕಾರ ನೀಡಬೇಕು. ಸೊಂಡಿಲನ್ನು ಮಾಡಿದ ಬಳಿಕ ಮೆಣಸಿನ ಕಾಳನ್ನು ಬಳಸಿ ಮೂರ್ತಿಗೆ ಕಣ್ಣು ಮಾಡಬಹುದು. ಬಳಿಕ ಹೂವಿನ ಅಲಂಕಾರ ಮಾಡಿದರೆ ಪ್ರತಿಷ್ಟಾಪಿಸಿ ಗಣೇಶ ಮೂರ್ತಿ ಸಿದ್ಧವಾಗುತ್ತದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಫೇಸ್ ಬುಕ್ ಪೇಜ್ ಗೆ ಭೇಟಿ ನೀಡಿದರೆ ಅರಿಶಿನದಿಂದ ಗಣೇಶ ಮೂರ್ತಿ ಮಾಡುವ ವಿಧಾನ ತಿಳಿದುಕೊಳ್ಳಬಹುದು. ಇಂತಹ ಪುಟ್ಟ ಪುಟ್ಟ ಪ್ರತಿಮೆಗಳನ್ನು ತಯಾರಿಸಿ ಮನೆಯ ಆವರಣದಲ್ಲಿ ವಿಸರ್ಜನೆ ಮಾಡುವುದರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು