News Karnataka Kannada
Saturday, April 13 2024
Cricket
ಕರ್ನಾಟಕ

ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ ಸುಗಮವಾಗಿ ನಡೆಯಲಿ: ಡಿಸಿ ಹರೀಶ ಕುಮಾರ

Photo Credit :

ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ ಸುಗಮವಾಗಿ ನಡೆಯಲಿ: ಡಿಸಿ ಹರೀಶ ಕುಮಾರ

ಕಾರವಾರ: ಜಿಲ್ಲೆಯಲ್ಲಿ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ಯಾವುದೇ ಲೋಪ ದೋಷಗಳಿಲ್ಲದಂತೆ ಸುಗಮವಾಗಿ ನಡೆಯಲು ಎಲ್ಲಾ ಸೂಕ್ತ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಡಾ. ಹರೀಶ ಕುಮಾರ ಕೆ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಅವರೊಂದಿಗೆ ವಿಡಿಯೋ ಸಂವಾಧ ನಡೆಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲ 26 ಮತಗಟ್ಟೆಗಳಲ್ಲಿ ಯಾವುದೇ ರೀತಿಯ ಲೋಪದೋಷಗಳಾಗದಂತೆ ಅಕ್ರಮ ನಡೆಯದಂತೆ ಚುನಾವಣೆಯನ್ನು ಕಟ್ಟುನಿಟ್ಟಾಗಿ ನಡೆಸುವುದು ಎಲ್ಲ ನೋಡಲ್ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಒಂದು ವೇಳೆ ಲೋಪ ದೋಷಗಳು ಕಂಡು ಬಂದರೆ ಉಪವಿಭಾಗಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಅವರು ತಿಳಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಅಭ್ಯರ್ಥಿಗಳಾಗಲಿ ಅಥವಾ ರಾಜಕೀಯ ಪಕ್ಷಗಳಾಗಲಿ ಯಾವುದೇ ರ್ಯಾಲಿ, ಮಾಡುವಂತಿಲ್ಲ, ಇದರ ಬಗ್ಗೆ ಮಾಧ್ಯಮಗಳಲ್ಲಿ ಪ್ರಚಾರ ನೀಡಿ ಎಂದು ತಿಳಿಸಿದ ಅವರು, ಸಭೆ-ಸಮಾರಂಭಗಳ ನಡೆಸಬೇಕಾದಲ್ಲಿ ಜಿಲ್ಲೆಯ ಸಹಾಯಕ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂದರು.

ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಈ ಹಿಂದಿನ ಲೋಕಸಭಾ ಮತ್ತು ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿದ್ದಂತಹ ಚುನಾವಣೆ ನೀತಿ-ಸಂಹಿತೆ ನವೆಂಬರ್ 5ರವರೆಗೂ ಜಾರಿಯಲ್ಲಿರುತ್ತದೆ.

ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ನೀತಿ-ಸಂಹಿತೆಯನ್ನು ಪಾಲನೆ ಮಾಡಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್. ಕೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ, ಉಪವಿಭಾಗಾಧಿಕಾರಿ ಅಜಿತ್ ಹಾಗೂ ಪ್ರಿಯಾಂಗಾ ಎಂ. ತಹಶೀಲ್ದಾರ್ ಆರ್. ವಿ. ಕಟ್ಟಿ ಅವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು