News Karnataka Kannada
Saturday, April 20 2024
Cricket
ಕರ್ನಾಟಕ

ಪಿಎಫ್ ಐನಿಂದ ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ

Photo Credit :

ಪಿಎಫ್ ಐನಿಂದ ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ

ಚಾಮರಾಜನಗರ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಚಾಮರಾಜನಗರದಲ್ಲಿ ಪಿಎಫ್‍ಐ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ನಡೆಸಿಕೊಟ್ಟಿದ್ದಾರೆ.

ಕೊರಾನಾ ಸೋಂಕಿನಿಂದ ಮೃತಪಟ್ಟವರ ಶವದ ಅಂತ್ಯಕ್ರಿಯೆಯನ್ನು ಕೆಲವೆಡೆ ಗೌರವಯುತವಾಗಿ ನಡೆಸದ ಹಿನ್ನೆಲೆಯಲ್ಲಿ ಚರ್ಚೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಯಾರಾದರೂ ಮೃತಪಟ್ಟರೆ ಅಂಥವರ ಅಂತ್ಯಕ್ರಿಯೆಯನ್ನು ನಡೆಸುವುದಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ಕಾರ್ಯಕರ್ತರು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ಕೋವಿಡ್ ಮಾರ್ಗಸೂಚಿಯ ಪ್ರಕಾರ ನಡೆಸಲಾಗಿದ್ದು, ಮೊದಲೇ ತರಬೇತಿ ಪಡೆದಿದ್ದ ಪಿಎಫ್‍ಐ ಕಾರ್ಯಕರ್ತರು ಇದನ್ನು ಮಾಡಿ ಮುಗಿಸಿದ್ದಾರೆ

 

ಕೊಂಗರಹಳ್ಳಿಯ 58 ವರ್ಷದ ವ್ಯಕ್ತಿ ಕೊರೋನಾ ಸೊಂಕಿನಿಂದ ಮೃತರಾದ ಹಿನ್ನೆಲೆಯಲ್ಲಿ, ಅವರ ಅಂತ್ಯಕ್ರಿಯೆಯನ್ನು ಮೃತರ ಸ್ವಗ್ರಾಮದಲ್ಲಿ ನಡೆಸಲು ಗ್ರಾಮದ ಮುಖಂಡರು ಒಪ್ಪಲಿಲ್ಲ. ಸರ್ಕಾರದಿಂದಲೇ ಅಂತ್ಯಕ್ರಿಯೆ ನಡೆಸಲಾಗುವುದು, ಸ್ಥಳಾವಕಾಶ ನೀಡುವಂತೆ ತಹಶೀಲ್ದಾರ್ ಕೋರಿದರೂ, ಕೊಂಗರಹಳ್ಳಿ ಗ್ರಾಮಸ್ಥರು ಒಪ್ಪಲಿಲ್ಲ. ಹೀಗಾಗಿ ಚಾಮರಾಜನಗರದ ವೈದ್ಯಕೀಯ ಕಾಲೇಜು ಪ್ರದೇಶದ 2 ಎಕರೆ ಭೂಮಿಯನ್ನು ಕೋವಿಡ್‍ನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆಂದೇ ಜಿಲ್ಲಾಡಳಿತ ಮೀಸಲಿಟ್ಟಿದೆ. ಹೀಗಾಗಿ ಅಲ್ಲಿಯೇ ಪಿಎಫ್‍ಐನ ಆರೇಳು ಮಂದಿ ಕಾರ್ಯಕರ್ತರು ಅಂತ್ಯಕ್ರಿಯೆ ನಡೆಸಿದರು. ಅಂತ್ಯ ಸಂಸ್ಕಾರ ವೇಳೆ ಪಿಪಿಇ ಕಿಟ್ ಧರಿಸಿ, ಹಳ್ಳಕ್ಕೆ ರಾಸಾಯನಿಕ ಸಿಂಪಡಿಸಿ, ಆ ಹಳ್ಳಕ್ಕೆ ಶವವನ್ನು ಹಗ್ಗಕಟ್ಟಿ ಇಳಿಬಿಟ್ಟು, ನಂತರವೂ ರಾಸಾಯನಿಕ ಸಿಂಪಡಣೆ ಮಾಡಿ, ಮಣ್ಣು ಮುಚ್ಚಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್ ಹಾಗೂ ಈ ಕಾರ್ಯಕ್ಕೆ ನಿಯೋಜಿತಗೊಂಡಿರುವ ವೈದ್ಯಕೀಯ ಸಿಬ್ಬಂದಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು