News Karnataka Kannada
Thursday, April 25 2024
Cricket
ಕರ್ನಾಟಕ

ಪಿಎಸ್ಐ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆ ತೆರೆದು ಜನರಿಗೆ ಪಂಗನಾಮ

Photo Credit :

ಪಿಎಸ್ಐ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆ ತೆರೆದು ಜನರಿಗೆ ಪಂಗನಾಮ

ಕಾರವಾರ: nನಗರದ ಗ್ರಾಮೀಣ ಪಿಎಸ್ಐ ಹೆಸರಿನಲ್ಲಿ ನಕಲಿ ಫೆಸ್ಬುಕ್ ಖಾತೆ ತೆರೆದು ವಂಚನೆ ಮಾಡಿದ ಪ್ರಕರಣ ಕಾರವಾರದಲ್ಲಿ ಬೆಳಕಿಗೆ ಬಂದಿದೆ.

ಕಾರವಾರ ನಗರದ ಗ್ರಾಮೀಣ ಠಾಣೆಯ ಪಿಎಸ್ಐ ರೇವಣಸಿದ್ದಪ್ಪ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅವರ ಫೇಸ್ಬುಕ್ ನಿಂದ ಫೋಟೊಗಳನ್ನು ಡೌನ್ ಲೋಡ್ ಮಾಡಿಕೊಂಡು ನಕಲಿ ಖಾತೆಗೆ ಹಾಕಿ ರೇವಣಸಿದ್ದಪ್ಪಅವರ ಸ್ನೇಹಿತರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಅತೀ ಅರ್ಜೆಂಟ್ ಆಗಿ ಹಣ ಬೇಕು.

ನನ್ನ ಖಾತೆ ಅಥವಾ ಯುಪಿಐ ಮೂಲಕ ಹಣ ಹಾಕುವಂತೆ ಮೆಸೆಂಜರ್ ಮೂಲಕ ಸಂದೇಶ ಬಂದಿದೆ. ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡುವಂತೆ ಕೇಳಿದ್ದಾರೆ. ನಕಲಿ ಫೆಸ್ ಬುಕ್ ಖಾತೆಯಿಂದ ಪಿಎಸ್ಐ ಸ್ನೇಹಿತನ ಜೊತೆಗೆ ಚಾಟ್ ಮಾಡಿದಾಗಿದೆ. ಅದರಲ್ಲೊಬ್ಬ ಅಧಿಕಾರಿ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದರಿಂದ ವಿಷಯ ತಿಳಿದು ಬಂದಿದೆ. ಅಷ್ಟರೊಳಗೆ ಸಾಕಷ್ಟು ಜನರು ಹಣ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ.

ಈ ಬಗ್ಗೆ ಗ್ರಾಮೀಣ ಠಾಣೆಯ ಪಿಎಸೈ ರೇವಣಸಿದ್ದಪ್ಪ ಮಾತನಾಡಿ, ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದು ತನ್ನ ಸ್ನೇಹಿತರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಮೆಸೆಂಜರ್ ಮೂಲಕ ಚಾಟ್ ಮಾಡಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಗಮನಕ್ಕೆ ಬಂದಿದೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ನಕಲಿ ಖಾತೆ ತೆರೆದ ಖದೀಮರನ್ನು ಈಗಾಗಲೇ ತನಿಖೆ ಕೈಗೊಂಡಿದ್ದೇವೆ. ಈ ಬಗ್ಗೆ ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು