News Karnataka Kannada
Saturday, April 20 2024
Cricket
ಕರ್ನಾಟಕ

ಪಿರಿಯಾಪಟ್ಟಣದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

Photo Credit :

ಪಿರಿಯಾಪಟ್ಟಣದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಪಿರಿಯಾಪಟ್ಟಣ: ವಿವಿಧ ಬೇಡಿಕೆಗಳನ್ನಿಟ್ಟು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಬಿಸಿಯೂಟದ ನೌಕರರು ತಾಲೂಕು ಆಡಳಿತ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷೆ ಲೀಲಾವತಿ ಮಾತನಾಡಿ ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟದ ಯೋಜನೆಯಡಿ 1,17,999 ನೌಕರರು ಕಳೆದ 19 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಈ ನೌಕರಿಯಲ್ಲಿ ಬಹು ಭಾಗ ಬಡ ಮಹಿಳೆಯರಿದ್ದು ಇದೇ ಕೆಲಸವನ್ನು ಆಶ್ರಯಿಸಿ ಜೀವನ ಸಾಗಿಸುತ್ತಿದ್ದಾರೆ.

ದೇಶದಲ್ಲಿ ಕೋವಿಡ್-19 ನಿಂದಾಗಿ ವೈರಸ್ ಹರಡುವಿಕೆ ತಡೆಗಟ್ಟಲು ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಈ ಸಂದರ್ಭದಲ್ಲಿ ಆಹಾರ ಪದಾರ್ಥಗಳನ್ನು ಬೇಯಿಸಿ ವಿದ್ಯಾರ್ಥಿಗಳಿಗೆ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆಹಾರ ಧ್ಯಾನ್ಯಗಳನ್ನು ಬಿಸಿಯೂಟ ನೌಕರರಿಂದಲೇ ವಿದ್ಯಾರ್ಥಿಗಳ ಮನೆಗಳಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಆದರೆ ಈ ನೌಕರರಿಗೆ ಕಳೆದ ಏಪ್ರಿಲ್ ತಿಂಗಳಿಂದ ಯಾವುದೇ ವೇತನ ನೀಡಿಲ್ಲ, ಶಾಲಾ ಶಿಕ್ಷಕರಿಗೆ ಮಾತ್ರ ಸರ್ಕಾರ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡದಿದ್ದರೂ ವೇತನ ನೀಡುತ್ತಿದೆ. ಈ ತಾರತಮ್ಯ ನೀತಿಯಿಂದಾಗಿ ಶಿಕ್ಷಣ ಇಲಾಖೆಯೂ ಬಿಸಿಯೂಟ ನೌಕರರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ.

ಈ ವಿಚಾರವಾಗಿ ಕಳೆದ ಏಪ್ರಿಲ್ ತಿಂಗಳಿನಲ್ಲಿಯೇ ರಾಜ್ಯದ ಮುಖ್ಯಮಂತ್ರಿ, ಶಿಕ್ಷಣ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವೇತನ ಸೇರಿದಂತೆ ಇನ್ನಿತರೆ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಗಿದೆ. ಆದರೆ ಇದುವರೆಗೂ ಸರ್ಕಾರ ಯಾವುದೇ ರೀತಿಯ ಕ್ರಮಕೈಗೊಳದೆ ಬಿಸಿಯೂಟ ನೌಕರರನ್ನು ಕಡೆಗಣನೆ ಮಾಡುತ್ತಿದೆ ಎಂದು ಆರೋಪಿಸಿದರು.

ಆದರಿಂದ ಸರ್ಕಾರ ಈ ಕೂಡಲೆ ಬಿಸಿಯೂಟ ನೌಕರರಿಗೆ ಏಪ್ರಿಲ್ ತಿಂಗಳಿನಿಂದ ಶಾಲೆ ಪ್ರಾರಂಭವಾಗುವವರೆಗೆ ವೇತನ ನೀಡಬೇಕು. ನೌಕರರನ್ನು ಶಾಸನಾತ್ಮಕವಾಗಿ ಖಾಯಂಗೊಳಿಸಿ ಸವಲತ್ತುಗಳನ್ನು ನೀಡುವುದರ ಜೊತೆಗೆ ಕನಿಷ್ಟ 6 ತಿಂಗಳಿನವರೆಗೆ ಪಡಿತರವನ್ನು ಒದಗಿಸಬೇಕು. ಇದಲ್ಲದೆ ಲಾಕ್ ಡೌನ್ ಅವಧಿಯಲ್ಲಿ 7,500ರೂನಂತೆ ಮುಂದಿನ 6 ತಿಂಗಳು ವೇತನ ನೀಡಬೇಕು. ಎಲ್‍ಐಸಿ ಆಧಾರಿತ ಪೆನ್ಷನ್ ನಿಗದಿ ಮಾಡಿ, ಕೊವೀಡ್-19 ವೈದ್ಯಕೀಯ ತುರ್ತು ಪರಿಸ್ಥತಿ ಪರಿಗಣಿಸಿ ನೌಕರರಿಗೆ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಹಾಗೂ ಐಎಲ್ಸಿ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರಲ್ಲದೆ, ಬೇಡಿಕೆ ಈಡೇರದಿದ್ದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸುಮಿತ್ರಾ, ಖಜಾಂಚಿ ಮಂಜುಳಾ, ಲಕ್ಷ್ಮಿ, ಸರಸ್ವತಿ, ಜ್ಯೋತಿ, ಸುಮಲತಾ ಸೇರಿದಂತೆ ಇತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು