News Karnataka Kannada
Wednesday, April 24 2024
Cricket
ಕರ್ನಾಟಕ

ಪ್ರಕೃತಿ ಹದಗೆಡಲು ಮನುಷ್ಯನೇ ಕಾರಣ: ಪ್ರೊ. ವೈ. ಎಸ್. ಸಿದ್ದೇಗೌಡ

Photo Credit :

ಪ್ರಕೃತಿ ಹದಗೆಡಲು ಮನುಷ್ಯನೇ ಕಾರಣ: ಪ್ರೊ. ವೈ. ಎಸ್. ಸಿದ್ದೇಗೌಡ

ತುಮಕೂರು: ಭೂಮಿಯ ವ್ಯವಸ್ಥೆ ಹದಗೆಡಲು ಪ್ರಕೃತಿಯ ಕಡೆಗಿನ ಮನುಷ್ಯನ ನಿರ್ಲಕ್ಷ್ಯವೇ ಕಾರಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ.) ವೈ. ಎಸ್. ಸಿದ್ದೇಗೌಡ ತಿಳಿಸಿದರು.

ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಸ್ನಾತಕೋತ್ತರ ಪರಿಸರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

 

ಪರಿಸರ ಸಂರಕ್ಷಣೆ ನಮ್ಮ ನಿತ್ಯದ ಕಾಯಕವಾಗಬೇಕು. ಪ್ರಕೃತಿ ಉಳಿಯದೆ ಯಾರಿಗೂ ಉಳಿಗಾಲವಿಲ್ಲ. ಕೋವಿಡ್‌ನಂತಹ ಸಾಂಕ್ರಾಮಿಕ ರೋಗಗಳು ಹೆಚ್ಚಾಗಲು ಮನುಷ್ಯನ ದುಷ್ಕೃತ್ಯಗಳೇ ಕಾರಣ ಎಂದರು.

 

ವಿಶ್ವ ಪರಿಸರ ದಿನದ ಅಂಗವಾಗಿ ಕೋವಿಡ್‌ನಿಂದ ಗುಣಮುಖರಾದವರಿಂದ ೫೨ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

ಕುಲಸಚಿವ ಪ್ರೊ. ಕೆ. ಶಿವಚಿತ್ತಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ. ನಿರ್ಮಲರಾಜು, ಸಿಂಡಿಕೇಟ್ ಸದಸ್ಯ ಸುನೀಲ್ ಕುಮಾರ, ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಮೌನೇಶ್ವರ ಶ್ರೀನಿವಾಸರಾವ್, ಪರಿಸರ ಅಧ್ಯಯನ ವಿಭಾಗದ ಸಂಯೋಜಕ ಡಾ. ಹೆಚ್. ರಾಜಾನಾಯ್ಕ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜು ಕೆ.ಎಸ್., ಕಲಾ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರಪ್ಪ ಕೆ., ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಶಾಲಿನಿ ಬಿ. ಆರ್. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಸ್ವಯಂ ಸೇವಕರು ಪಾಲ್ಗೊಂಡಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು