News Karnataka Kannada
Sunday, April 21 2024
Cricket
ಕರ್ನಾಟಕ

ಪ್ರತಿ ಗ್ರಾಮದಲ್ಲಿ ರುದ್ರಭೂಮಿ ನಿರ್ಮಾಣಕ್ಕೆ ಆದ್ಯತೆ ನೀಡಲು ಸಚಿವ ಆರ್ ಅಶೋಕ್ ಸೂಚನೆ

Photo Credit :

ಪ್ರತಿ ಗ್ರಾಮದಲ್ಲಿ ರುದ್ರಭೂಮಿ ನಿರ್ಮಾಣಕ್ಕೆ ಆದ್ಯತೆ ನೀಡಲು ಸಚಿವ ಆರ್ ಅಶೋಕ್ ಸೂಚನೆ

ಯಾದಗಿರಿ: ರುದ್ರಭೂಮಿ ಇಲ್ಲದಿರುವ ಗ್ರಾಮಗಳಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿ, ಲಭ್ಯವಿಲ್ಲದಿದ್ದರೆ ಖಾಸಗಿಯಾಗಿ ಖರೀದಿಸಿ ನಿರ್ಮಿಸುವಂತೆ ಜಿಲ್ಲೆಯ ಎಲ್ಲಾ ತಹಸೀಲ್ದಾರರಿಗೆ ಕಂದಾಯ ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ಅಶೋಕ್ ಅವರು ತಾಕೀತು ಮಾಡಿದರು.

ಅವರು ಆಗಸ್ಟ್ 26ರ ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೆರೆ ಹಾನಿ ಪರಿಹಾg ಹಾಗೂ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಯಾದಗಿರಿ, ಶಹಾಪುರ, ಸುರಪುರ, ಗುರುಮಿಠಕಲ್, ವಡಿಗೇರಾ ಹಾಗೂ ಹುಣಸಗಿ ತಾಲೂಕುಗಳ ಎಲ್ಲಾ ಗ್ರಾಮಗಳಲ್ಲಿಯೂ ರುದ್ರಭೂಮಿ ಲಭ್ಯವಿರಬೇಕು, ಸಶ್ಮಾನ ಭೂಮಿ ಇಲ್ಲದಿರುವ ಗ್ರಾಮಗಳಲ್ಲಿ ಸರ್ಕಾರಿ ಭೂಮಿಯು ಗುರುತಿಸಬೇಕು, ಎ ಅಥವಾ ಬಿ ಕರಾಬು ಸೇರಿದಂತೆ ಸರಕಾರಿ ಒಡೆತನದ ಭೂಮಿಗಳನ್ನು ಆಧ್ಯತೆ ಮೇರೆಗೆ ಕನಿಷ್ಠ ಒಂದು ಎಕರೆ ಭೂಮಿಯನ್ನು ಪತ್ತೆ ಹಚ್ಚಬೇಕು, ಅದು ಇಲ್ಲದಿದ್ದಲ್ಲೀ, ಖಾಸಗಿಯಾಗಿ ಖರೀದಿಸಿ, ರುದ್ರಭೂಮಿಯನ್ನು ನಿರ್ಮಿಸಿಕೊಡಬೇಕು, ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲೂ ಕಡ್ಡಾಯವಾಗಿ ಸ್ಮಶಾನ ಭೂಮಿ ಇರಲೇಬೇಕು, ಅಲ್ಲಿ ಯಾವುದೆ ಜಾತಿ ಪಂಥಗಳ ಬೇಧಭಾವವಿರಬಾರದು, ಒಟ್ಟಾರೆ ಅದು ಸಾರ್ವಜನಿಕವಾಗಿ ಅದು ಬಳಕೆಯಾಗಬೇಕು ಎಂದು ಅವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು