News Karnataka Kannada
Wednesday, April 24 2024
Cricket
ಕರ್ನಾಟಕ

ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಭೇಟಿ

Photo Credit :

ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಭೇಟಿ

ಮಡಿಕೇರಿ: ಭಾಗಮಂಡಲ ಹೋಬಳಿಯ ನೆರೆಪೀಡಿತ ಪ್ರದೇಶಗಳಾದ ಭಾಗಮಂಡಲ, ತಣ್ಣಿಮಾನಿ ಹಾಗೂ ಚೇರಂಗಾಲ ಗ್ರಾಮಗಳಿಗೆ ಶಾಸಕರಾದ ಕೆ.ಜಿ.ಬೋಪಯ್ಯ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೇರಂಗಾಲ ಗ್ರಾಮದ ಕೂಡಕಂಡಿ ಮನೆಗಳಿಗೆ ತೆರಳುವ ರಸ್ತೆಯಲ್ಲಿನ ಕಾಲು ಸೇತುವೆ ಮುರಿದು ಹೋಗಿದೆ. ಪರಿವಾರ ಹಾಗೂ ಮತ್ತಾರಿ ಮನೆಗಳಿಗೆ ತೆರಳುವ ರಸ್ತೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿರುವ ಮುಳುಗು ಸೇತುವೆ ಹಾನಿಗೀಡಾಗಿರುವ ಕಾರಣ  ತಾತ್ಕಾಲಿಕವಾಗಿ ನಿರ್ಮಿಸಿರುವ ಕಾಲು ಸೇತುವೆ ವೀಕ್ಷಿಸಿದರು.

ಬಳಿಕ ಮಾತನಾಡಿದ ಶಾಸಕರು ಹಾನಿಗೀಡಾದ ಸೇತುವೆ ಹಾಗೂ ರಸ್ತೆಗಳನ್ನು ದುರಸ್ತಿಗೊಳಿಸಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಎಂಜಿನಿಯರ್‍ ಗಳು ಭೇಟಿ ನೀಡಿ ಕ್ರಿಯಾಯೋಜನೆ ತಯಾರಿಸಿ ಕಾಮಗಾರಿ ಆರಂಭಿಸಲಿದ್ದಾರೆ ಎಂದರು.

ಚೇರಂಗಾಲ ಹಾಗೂ ತಣ್ಣಿಮಾನಿ ಭಾಗಗಳಲ್ಲಿ ಪ್ರವಾಹದಿಂದಾಗಿ ಹಾಗೂ ಗುಡ್ಡ ಕುಸಿತದಿಂದಾಗಿ ನಾಟಿ ಮಾಡಿದ ಗದ್ದೆಗಳು ಕೆಸರು ಮಣ್ಣು ಮತ್ತು ಮರಳಿನಿಂದ ತುಂಬಿ ಕೃಷಿಕರಿಗೆ ನಷ್ಟವುಂಟಾಗಿದೆ. ಚೇರಂಗಾಲ ವ್ಯಾಪ್ತಿಯಲ್ಲಿ ಸಾಕಷ್ಟು ಭತ್ತದ ಗದ್ದೆಗಳು ಹಾಗೂ ತೋಟಗಳು ಹಾನಿಗೊಳಗಾಗಿದ್ದು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ ಎಲ್ಲಾ ರೈತರಿಗೂ ಯಾವುದೇ ನಿಬಂಧನೆ ಇಲ್ಲದೆ ಕೂಡಲೇ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು. ತಣ್ಣಿಮಾನಿ ಗ್ರಾಮದ ಕುದುಪಜೆ ಐನ್ ಮನೆಗೆ ತೆರಳುವ ರಸ್ತೆಯಲ್ಲಿನ ಸೇತುವೆ ಹಾನಿಗೊಳಗಾಗಿದ್ದು ಅದನ್ನು ಕೂಡಲೇ ದುರಸ್ತಿ ಮಾಡಲಾಗುವುದು ಎಂದರು.

ಚೇರಂಗಾಲದ ಬೆನ್ನೂರು ಕಾಡಿನಲ್ಲಿ ಸುಮಾರು 50 ಏಕರೆಯಷ್ಟು ಪ್ರದೇಶ ಗುಡ್ಡ ಕುಸಿದು ಹಾನಿಗೊಳಗಾಗಿದೆ. ಇಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಕಾಲೋನಿ, ಕೋಳಿಕಾಡು ಸ್ಥಳಗಳಿಗೆ ಸಾಕಷ್ಟು ಹಾನಿಯಾಗಿದೆ. ಚೇರಂಗಾಲ ವಾಪ್ತಿಯಲ್ಲಿನ ನಾಲ್ಕೈದು ಮನೆಗಳು ಮಳೆಗಾಳಿಯಿಂದಾಗಿ ಕುಸಿದು ಬಿದ್ದು ವಾಸಕ್ಕೆ ಯೋಗ್ಯವಿಲ್ಲದಂತಾಗಿದೆ. ಅವರಿಗೆ ಬದಲಿ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು.

ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಹೊಸಮನೆ ಕವಿತಾ ಪ್ರಭಾಕರ್, ತಹಶೀಲ್ದಾರ್ ಮಹೇಶ್, ಗ್ರಾಮ ಲೆಕ್ಕಿಗರಾದ ಶರ್ಮಿಳಾ, ಪ್ರಮುಖರಾದ ಪಿ.ಎಂ.ರಾಜೀವ್ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು