News Karnataka Kannada
Wednesday, April 17 2024
Cricket
ಕರ್ನಾಟಕ

ಬಕ್ರೀದ್ ನಿಮಿತ್ತ ಅಕ್ರಮವಾಗಿ ಗೋವುಗಳ ಸಾಗಾಟ ತಡೆಗೆ ಕ್ರಮ

Photo Credit :

ಬಕ್ರೀದ್ ನಿಮಿತ್ತ ಅಕ್ರಮವಾಗಿ ಗೋವುಗಳ ಸಾಗಾಟ ತಡೆಗೆ ಕ್ರಮ

ಕಾರವಾರ: ಜು.31ರಿಂದ ಆ.1ರವರೆಗೆ ನಡೆಯಲಿರುವ ಬಕ್ರೀದ್ ನಿಮಿತ್ತ ಜಿಲ್ಲೆಯಲ್ಲಿ ಅಕ್ರಮವಾಗಿ ಗೋವು ಹಾಗೂ ಗೋಮಾಂಸ ಸಾಗಾಟವನ್ನು ತಡೆಯಲು 21 ಚೆಕ್ ಪೋಸ್ಟ್ ತೆರೆಯಲಾಗಿದೆ  ಎಂದು ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.

ಅಕ್ರಮ ಗೋಸಾಗಾಣಿಕೆ ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಾದ ಕ್ರಮಕೈಗೊಳ್ಳಲಾಗುತ್ತಿದೆ. ಚೆಕ್ ಪೋಸ್ಟ್ ಗಳಲ್ಲಿ ದಿನ 24 ತಾಸು ಪೊಲೀಸರು ಕರ್ತವ್ಯದಲ್ಲಿ ಇರಲಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 21 ಪ್ರಕರಣ ದಾಖಲಿಸಿಕೊಂಡು 56 ಆರೋಪಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮಕೈಗೊಂಡು ಜಾನುವಾರು ಸಾಗಾಟಕ್ಕೆ ಬಳಕೆ ಮಾಡಿದ್ದ ವಾಹನ ಜಪ್ತಿ ಮಾಡಲಾಗಿದೆ .

ಬಕ್ರೀದ್ ಹಬ್ಬದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಈ ಹಿಂದೆ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ 271 ಪ್ರಕರಣಗಳನ್ನು ದಾಖಲಿಸಿ 554 ಜನರಿಂದ  ಮುಚ್ಚಳಿಕೆಯನ್ನು ಪಡೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಹಾಗೂ ಅಕ್ರಮ ಗೋಸಾಗಾಣಿಕೆ ತಡೆಗಟ್ಟಲು ಉತ್ತರ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು