News Karnataka Kannada
Friday, April 12 2024
Cricket
ಕರ್ನಾಟಕ

ಬಿಳಿಗಿರಿರಂಗನಾಥಸ್ವಾಮಿ ದೇಗುಲ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Photo Credit :

ಬಿಳಿಗಿರಿರಂಗನಾಥಸ್ವಾಮಿ ದೇಗುಲ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಚಾಮರಾಜನಗರ: ಇತಿಹಾಸ ಪ್ರಸಿದ್ದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಜೀರ್ಣೋದ್ದಾರ ಕಾಮಗಾರಿಯನ್ನು ನವೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ ಭಕ್ತಾಧಿಗಳ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಳಿಗಿರಿರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ಅಲ್ಲಿ ಕೈಗೊಂಡಿರುವ ವಿಮಾನ ಗೋಪುರ, ಪ್ರಾಕಾರ ಗೋಪುರದಲ್ಲಿನ ವಿಗ್ರಹಗಳ ನಿರ್ಮಾಣ ಸೇರಿದಂತೆ ಇತರೆ ಜೀರ್ಣೋದ್ದಾರ ಕಾಮಗಾರಿಯನ್ನು ಪರಿಶೀಲಿಸಿದರು. ಗರ್ಭಗುಡಿಗಳಿಗೆ ಗ್ರಾನೈಟ್ ಅಳವಡಿಕೆ ಕಾರ್ಯವನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಅವರು ನಿರ್ಮಾಣವಾಗಿರುವ ಯಾಗಶಾಲೆಗೆ ಬಾಕಿ ಉಳಿದಿರುವ ವಿದ್ಯುತ್ ವೈರಿಂಗ್, ಬಾಗಿಲುಗಳ ಅಳವಡಿಸಿಕೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ರಾಜಗೋಪುರಕ್ಕೆ ಸಾಗುವ ತಾತ್ಕಲಿಕ ಮೆಟ್ಟಿಲುಗಳ ನಿರ್ಮಾಣ, ರೈಲಿಂಗ್ಸ್ ಹಾಕುವ ಕೆಲಸಗಳನ್ನು ಅತ್ಯಂತ ಜರೂರಾಗಿ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ದೇವಾಲಯದ ಹೊರ ಪ್ರಕಾರದಲ್ಲಿ ಪ್ರವಾಸೋದ್ಯಮ ಹಾಗೂ ರಾಜ್ಯ ಪ್ರಾಚ್ಯವಸ್ತು ಇಲಾಖೆ ವತಿಯಿಂದ ಹಾಕಲಾಗುತ್ತಿರುವ ನೆಲಹಾಸು ಕೆಲಸವನ್ನು ಸಹ ವಿಳಂಬ ಮಾಡಬಾರದು ಎಂದು ಸೂಚಿಸಿದ ಜಿಲ್ಲಾಧಿಕಾರಿಯವರು ದೇವಾಲಯದ ಪ್ರಸ್ತುತ ನಿತ್ಯ ಅನ್ನದಾಸೋಹ ಭವನದ ಕಟ್ಟಡವನ್ನು ಶಾಶ್ವತವಾಗಿ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಬೇಕು, ಸುತ್ತುಗೋಡೆ ನಿರ್ಮಾಣಕ್ಕೂ ಅಗತ್ಯ ಅಂದಾಜು ಪಟ್ಟಿ ಸಿದ್ಧಪಡಿಸುವಂತೆ ತಿಳಿಸಿದರು.

ದೇವಾಲಯದ ಹಿಂಭಾಗದಲ್ಲಿರುವ ಕಮರಿ ಆವರಣದಲ್ಲಿ ಉತ್ತಮ ಉದ್ಯಾನವನವನ್ನು ನಿರ್ಮಾಣ ಮಾಡಬೇಕು, ವೀಕ್ಷಣಾ ಸ್ಥಳವನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯವಿರುವ ಕೆಲಸಗಳ ಅಂದಾಜು ಪಟ್ಟಿಯನ್ನು ತಯಾರಿಸಿ ಸಲ್ಲಿಸುವಂತೆ ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು