News Karnataka Kannada
Thursday, April 25 2024
ಕರ್ನಾಟಕ

ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

Photo Credit :

ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಹುದಿಕೇರಿ ಮತ್ತು ಶ್ರೀಮಂಗಲ ಹೋಬಳಿಗಳಲ್ಲಿ ಬೆಳೆಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

ಈ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆ ಮತ್ತು ಗಾಳಿಯ ತೀವ್ರತೆಯಿಂದ  ಕೃಷಿ, ತೋಟಗಾರಿಕೆ ಮತ್ತು ತೋಟದ ಬೆಳೆಗಳು ಹಾನಿಯಾಗಿದ್ದು, ಜಿಲ್ಲೆಯಲ್ಲಿ ಅಂದಾಜು 34,170 ಹೆಕ್ಟೇರ್ ಬೆಳೆ ಹಾನಿಯಾಗಿರುತ್ತದೆ.

ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ ಮಾರ್ಗಸೂಚಿಯಂತೆ ಶೇ.33 ಮತ್ತು ಅದಕ್ಕೂ ಮೇಲ್ಪಟ್ಟು ಬೆಳೆ ಹಾನಿಗೊಳಗಾದ ರೈತರು ಬೆಳೆಹಾನಿ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ. ಅರ್ಹ ರೈತರು ಪರಿಹಾರ ಕೋರಿ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಹತ್ತಿರದ ನಾಡ ಕಚೇರಿ ಅಥವಾ ಸಂಬಂಧಪಟ್ಟ ಗ್ರಾಮಲೆಕ್ಕಿಗರಿಗೆ ಸಲ್ಲಿಸಬಹುದಾಗಿದೆ. ಈ ಬಗ್ಗೆ ಕಂದಾಯ, ತೋಟಗಾರಿಕೆ, ಕೃಷಿ ಮತ್ತು ಕಾಫಿ ಮಂಡಳಿಯಿಂದ ಜಂಟಿ ಸರ್ವೆ ಕೈಗೊಳ್ಳಲಾಗಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಅವರು ಬೆಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು