News Karnataka Kannada
Tuesday, April 16 2024
Cricket
ಕರ್ನಾಟಕ

ಭಕ್ತರಿಗೆ ಅನುಕೂಲ ಕಲ್ಪಿಸಿದರೆ ತಪ್ಪೇನು?: ಭಾಗಮಂಡಲ ಹೋರಾಟ ಸಮಿತಿ

Photo Credit :

ಭಕ್ತರಿಗೆ ಅನುಕೂಲ ಕಲ್ಪಿಸಿದರೆ ತಪ್ಪೇನು?: ಭಾಗಮಂಡಲ ಹೋರಾಟ ಸಮಿತಿ

ಮಡಿಕೇರಿ: ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗಾಗಿ ಸ್ಥಳೀಯರು ವಸತಿ ನಿಲಯಗಳನ್ನು ಕಲ್ಪಿಸಿ ಅಗತ್ಯ ವಸ್ತುಗಳ ಖರೀದಿಗೆ ಅಂಗಡಿಗಳನ್ನು ತೆರೆದು ವ್ಯಾಪಾರ ನಡೆಸಿದರೆ ತಪ್ಪೇನು ಎಂದು ಪ್ರಶ್ನಿಸಿರುವ ಭಾಗಮಂಡಲ ನಾಗರಿಕ ಹೋರಾಟ ಸಮಿತಿಯ ಪದಾಧಿಕಾರಿಗಳು, ಸ್ಥಳೀಯರ ನಿತ್ಯ ಜೀವನಕ್ಕೆ ಯಾವುದೇ ರೀತಿಯ ಅಡ್ಡಿ ಎದುರಾದರೂ ಕಾನೂನಿನ ಮೂಲಕ ಹೋರಾಟ ನಡೆಸಲು ಸಿದ್ಧ ಇರುವುದಾಗಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಕುದುಕುಳಿ ಭರತ್ ಹಾಗೂ ಪದಾಧಿಕಾರಿಗಳು ಹೋಸ್ಟೇಗಳನ್ನು ನಡೆಸಬಾರದು ಮತ್ತು ಅಂಗಡಿ, ಹೊಟೇಲ್ ಗಳನ್ನು ತೆರೆದು ವ್ಯಾಪಾರ ಮಾಡಬಾರದೆನ್ನುವ ನಿಯಮ ತಲಕಾವೇರಿ ಮತ್ತು ಭಾಗಮಂಡಲಕ್ಕೆ ಮಾತ್ರ ಯಾಕೆ ಅನ್ವಯ ಎಂದು ಪ್ರಶ್ನಿಸಿದ್ದಾರೆ.

ಜಿಲ್ಲೆಯ ಪ್ರತಿ ಊರು, ಊರುಗಳಲ್ಲಿ ಶ್ರದ್ಧಾಭಕ್ತಿಯಿಂದ ಪೂಜಿಸಲ್ಪಡುವ ದೇವಾಲಯಗಳಿವೆ. ಎಲ್ಲಾ ಪ್ರದೇಶಗಳಲ್ಲಿಯೂ ಹೋಂಸ್ಟೇಗಳಿವೆ, ಊಟದ ಮನೆಗಳಿವೆ ಮತ್ತು ಮಾಂಸಹಾರವೂ ನಡೆಯುತ್ತಿದೆ. ಆದರೆ ಭಕ್ತರ ಅನುಕೂಲಕ್ಕಾಗಿಯೇ ತಮ್ಮ ತಮ್ಮ ಸ್ವಂತ ಜಾಗ, ಮನೆಗಳಲ್ಲಿ ವ್ಯವಸ್ಥೆ ಕಲ್ಪಿಸುತ್ತಿರುವ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಇದೆಲ್ಲವನ್ನು ನಿಷೇಧಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದು ಸರಿಯಲ್ಲವೆಂದರು.

ಕೇವಲ ದೇವಾಲಯಗಳಿದ್ದರೆ ಸಾಲದು, ಭಕ್ತರಿಗೆ ಪೂರಕವಾದ ವ್ಯವಸ್ಥೆಗಳು ಕೂಡ ಇರಬೇಕಾಗುತ್ತದೆ. ಕ್ಷೇತ್ರಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರ ಸಂಖ್ಯೆ ಹೆಚ್ಚಾದರೆ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿ ಮಾಡಬೇಕಾಗುತ್ತದೆ ಎಂದು ಪ್ರಮುಖರು ತಿಳಿಸಿದರು.

ಹಾವಾಗುಣ ವೈಪರೀತ್ಯದಿಂದ ಕಷ್ಟ, ನಷ್ಟಗಳನ್ನು ಅನುಭವಿಸುತ್ತಿರುವ ಸ್ಥಳೀಯ ರೈತರು ಜೀವನೋಪಾಯಕ್ಕಾಗಿ ಕೃಷಿಯೊಂದಿಗೆ ವ್ಯಾಪಾರವನ್ನು ಕೂಡ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಜಾತಿ, ಜನಾಂಗಗಳ ಭೇದವಿಲ್ಲ, ವಿನಾಕಾರಣ ಅಡ್ಡಿಪಡಿಸುವುದು ಸರಿಯಲ್ಲವೆಂದು ತಿಳಿಸಿರುವ ಅವರುಗಳು,  ಸ್ಥಳೀಯರನ್ನು ಕಡೆಗಣಿಸಿ ತಲಕಾವೇರಿ ವಿಚಾರದಲ್ಲಿ ಯಾವುದೇ ನಿರ್ಧಾರ  ಕೈಗೊಂಡರು ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರು ನಿಧನರಾದ ನಂತರ ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ತಪ್ಪುಗಳು ನಡೆದಿದ್ದರೆ ಅವರು ಬದುಕಿದ್ದಾಗಲೇ ಧ್ವನಿ ಎತ್ತಬೇಕಾಗಿತ್ತು ಎಂದು ಅಭಿಪ್ರಾಯಪಟ್ಟ ಭರತ್, ಆಗಸ್ಟ್ ತಿಂಗಳಿನಲ್ಲಿ ತಲಕಾವೇರಿಯಲ್ಲಿ ನಡೆದ ದುರಂತ ಮಾನವ ನಿರ್ಮಿತವೇ ಹೊರತು ಬೇರೆ ಯಾವುದೇ ಕಾರಣವಲ್ಲವೆಂದರು

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯರುಗಳಾದ ದಂಡಿನ ಕೆ.ಜಯಂತ್, ಕುಯ್ಯಮುಡಿ ಮನೋಜ್ ಕುಮಾರ್, ಪಟ್ಟಮಾಡ ಸಂಜು ಕಾವೇರಪ್ಪ ಹಾಗೂ ಕೆ.ತಮ್ಮಯ್ಯ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು