News Karnataka Kannada
Thursday, April 18 2024
Cricket
ಕರ್ನಾಟಕ

ಭಾರೀ ಮಳೆಯಾಗುವ ಸಂಭವ: ಹಾಸನದ ಜನರು ಎಚ್ಚರಿಕೆ ವಹಿಸಲು ಕರೆ

Photo Credit :

ಭಾರೀ ಮಳೆಯಾಗುವ ಸಂಭವ: ಹಾಸನದ ಜನರು ಎಚ್ಚರಿಕೆ ವಹಿಸಲು ಕರೆ

ಹಾಸನ: .ಹವಾಮಾನ ಇಲಾಖೆಯ ವರದಿಯಂತೆ ಹಾಸನ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳವರೆಗೆ ಭಾರಿ ಮಳೆಯಾಗುವ ಸಂಭವವಿದ್ದು, ಸಾರ್ವಜನಿಕರು ಅಗತ್ಯ ಎಚ್ಚರಿಕೆವಹಿಸಿ ಕೆರೆ-ಕಟ್ಟೆ ಹಾಗೂ ನದಿಪಾತ್ರಗಳ ಹತ್ತಿರ ಜನರು ಹೋಗದಿರಲು ಹಾಗೂ ಜಾನುವಾರುಗಳನ್ನು ಬಿಡದಿರುವಂತೆ  ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಆರ್.ಗಿರೀಶ್ ಅವರು ಕರೆ ನೀಡಿದ್ದಾರೆ.

 

ಜಿಲ್ಲೆಯಲ್ಲಿ ಗುಡ್ಡ ಕುಸಿತವಾಗುವ ಸಾಧ್ಯತೆ ಇರುವುದರಿಂದ ಹಾಗೂ ಜಿಲ್ಲೆಯ ನದಿಗಳಲ್ಲಿ ನೀರಿನ ಹರಿಯುವಿಕೆ ಹೆಚ್ಚಾಗುವುದರಿಂದ ನದಿಪಾತ್ರಗಳ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಿರಲು ಸಹಕರಿಸುವಂತೆ ಹವಮಾನ ಇಲಾಖೆ ತಿಳಿಸಿದೆ.

 

ತುರ್ತು ಸಂದರ್ಭಗಳಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿ ದೂರವಾಣಿ ಸಂಖ್ಯೆ: 08172-261111 ಹಾಗೂ ಉಚಿತ ಸಹಾಯವಾಣಿ 1077 ಗೆ ಕರೆ ಮಾಡಲು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು