News Karnataka Kannada
Wednesday, April 24 2024
Cricket
ಕರ್ನಾಟಕ

ಭಾಳೆಹೊನ್ನೂರಿನಲ್ಲಿ ಶ್ರೀ ಜಗದ್ಗುರು ರೇಣುಕಾ ಚಾರ್ಯರ ಪ್ರತಿಮೆ ನಿರ್ಮಾಣ: ಸಚಿವ ಸಿ.ಟಿ. ರವಿ

Photo Credit :

ಭಾಳೆಹೊನ್ನೂರಿನಲ್ಲಿ ಶ್ರೀ ಜಗದ್ಗುರು ರೇಣುಕಾ ಚಾರ್ಯರ ಪ್ರತಿಮೆ ನಿರ್ಮಾಣ: ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು: ಬಾಳೆಹೊನ್ನೂರಿನಲ್ಲಿ ಶ್ರೀ ಜಗದ್ಗುರು ರೇಣುಕಾ ಚಾರ್ಯರ ನೂತನ ೫೧ ಅಡಿ ಎತ್ತರದ ಪ್ರತಿಮೆ ನಿರ್ಮಾಣವಾಗುತ್ತಿದ್ದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸರ್ಕಾರದಿಂದ ಸೂಕ್ತ ನೆರವು ಒದಗಿಸಲಾಗುವುದು ಎಂದು  ಪ್ರವಾಸೋದ್ಯಮ,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ,  ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಸಿ.ಟಿ.ರವಿತಿಳಿಸಿದರು.

ಅವರು ಇಂದು ಬಾಳೆಹೊನ್ನೂರಿನ ರಂಬಾಪುರಿ ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುವ ಶ್ರೀ ಜಗದ್ಗುರು ರೇಣುಕಾ ಚಾರ್ಯರ ಪ್ರತಿಮೆ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

 

ರಂಭಾಪುರಿ ಶ್ರೀಗಳು ಯಾವುದೇ ಜಾತಿ, ಮತ, ಪಂಥ ಎನ್ನದೆ ಎಲ್ಲಾ ವರ್ಗದರನ್ನು ಸಮಾನತೆಯಿಂದ ಕಂಡವರು ಎಂದ ಅವರು ಶ್ರೀಗಳ ಪ್ರತಿಮೆ ನಿರ್ಮಾಣಕ್ಕಾಗಿ ಮುಜರಾಯಿ ಇಲಾಖೆ ನೇತೃತ್ವದಲ್ಲಿ ಸರ್ಕಾರದಿಂದ ಸೂಕ್ತ ನೆರವು ಒದಗಿಸಲಾಗುವುದು ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ದೆಹಲಿಗೆ ತೆರಳುವ ಸಂಬಂಧ ಮಾಹಿತಿ ನೀಡಿದ ಸಚಿವರು ಜಿಲ್ಲೆಗೆ ಮಂಜೂರಾಗಿರುವ ಇಂಜಿನಿಯರ್ ಕಾಲೇಜು ರೂಸಾಗೆ ಪ್ರಸ್ತಾವನೆ ಸಂಬಂಧ, ಹಾಗೂ ಕ್ರೀಡಾ ಇಲಾಖೆಯ ಯೋಜನೆಗಳ ಸಂಬಂಧಿಸಿದಂತೆ ವಿವಿಧ ಪ್ರಸ್ತಾವಗಳನ್ನು ಕೇಂದ್ರ ಸಚಿವರಗಳೊಂದಿಗೆ ಚರ್ಚಿಸಲಾಗುವುದು ಎಂದರು.

 

ಮೀನುಗಾರಿಕೆ, ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದು ಇವರಲ್ಲಿ ಓರ್ವನ ಶವ ಪತ್ತೆಯಾಗಿದ್ದು ಸರ್ಕಾರದ ಸೂಚನೆಯಂತೆ ರೂ.೬ ಲಕ್ಷ ಪರಿಹಾರ ಧನ ವಿತರಿಸಲು ಕ್ರಮ ವಹಿಸಲಾಗುವುದು ಎಂದ ಅವರು ಮುಂಬರುವ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ಸಾರ್ವಜನಿಕವಾಗಿ ಗಣೇಶ ವಿಗ್ರಹ ಪ್ರತಿಷ್ಠಾಪಿಸುವುದನ್ನು ಹೊರತು ಪಡಿಸಿ ಮನೆಗಳಲ್ಲಿ ಅಥವಾ ದೇವಸ್ಥಾನಗಳಲ್ಲಿ ಪ್ರತಿಷ್ಠಾಪಿಸುವಂತೆ ತಿಳಿಸಲಾಗಿದೆ ಎಂದರು.

 

ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಮಾತನಾಡಿ ಜಗದ್ಗುರು ರೇಣುಕಾಚಾರ್ಯರು ನಾಡಿಗೆ ಹಾಗೂ ಧಾರ್ಮಿಕ ಲೋಕಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ, ಜಾತಿ, ಮತ ಮರೆತು ಸಮಾನತೆಯ ತತ್ವ ಸಾರಿದ್ದಾರೆ, ಜಾತಿಗಿಂದ ಧರ್ಮ ದೊಡ್ಡದು, ಧರ್ಮವನ್ನು ಉಳಿಸಿ ಬೆಳೆಸುವ ಪರಿಕಲ್ಪನೆ ನೀಡಿದ್ದಾರೆ ಎಂದರು. 

ಶ್ರೀಗಳ ನೂತನ ಪ್ರತಿಮೆ ನಿರ್ಮಾಣಕ್ಕೆ ಅಂದಾಜು ೭.೫೦ ಕೋಟಿ ವೆಚ್ಚವಾಗಲಿದ್ದು ಹಣವನ್ನು ಭಕ್ತಾಧಿಗಳು, ಪೀಠದಿಂದ ಹಾಗೂ ಸರ್ಕಾರದ ನೆರವು ಪಡೆಯುವ ಉದ್ದೇಶ ಹೊಂದಿದೆ ಎಂದ ಅವರು ಪ್ರತಿಮೆ ನಿರ್ಮಾಣದ ಬಳಿಕ ಧಾರ್ಮಿಕ ಪ್ರೇರಣೆಯ ಸ್ಥಳವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ,  ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ, ಮಾಜಿ ಸಚಿವ ಡಿ.ಎನ್. ಜೀವರಾಜ್, ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು