News Karnataka Kannada
Saturday, April 13 2024
Cricket
ಕರ್ನಾಟಕ

ಭೂಕಾಯ್ದೆ ತಿದ್ದುಪಡಿ ವಿರುದ್ಧ ಕೊಡಗು ಜೆಡಿಎಸ್

Photo Credit :

ಭೂಕಾಯ್ದೆ ತಿದ್ದುಪಡಿ ವಿರುದ್ಧ ಕೊಡಗು ಜೆಡಿಎಸ್

ಮಡಿಕೇರಿ: ರೈತರು ಹಾಗೂ ಕಾರ್ಮಿಕ ವರ್ಗಕ್ಕೆ ಮಾರಕವಾಗುವ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ ಕೃಷಿ ಕ್ಷೇತ್ರ ಅಪಾಯವನ್ನು ಎದುರಿಸುತ್ತಿದೆ ಎಂದು ಆರೋಪಿಸಿ ಮತ್ತು ತಿದ್ದಪಡಿಯಾದ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಜಾತ್ಯತೀತ ಜನತಾದಳದ ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿದ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಇದು ರೈತ ವಿರೋಧಿ ನೀತಿಯಾಗಿದೆ ಎಂದು ಟೀಕಿಸಿದರು.

ಈ ಸಂದರ್ಭ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಕೃಷಿ ಕ್ಷೇತ್ರಕ್ಕೆ ದಕ್ಕೆ ತರುವ ನಿರ್ಧಾರಗಳನ್ನು ಕೈಗೊಂಡು ಶೋಷಣೆಯಲ್ಲಿ ತೊಡಗಿದೆ. ಬಂಡವಾಳಶಾಹಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ರೈತಾಪಿ ವರ್ಗದೊಂದಿಗೆ ಚರ್ಚಿಸದೆ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಗಳಿಗೆ ತಿದ್ದುಪಡಿ ತರಲಾಗಿದೆ ಎಂದು ಆರೋಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು