News Karnataka Kannada
Thursday, April 18 2024
Cricket
ಕರ್ನಾಟಕ

ಮಂಜೇಶ್ವರ ಶಾಸಕನ ವಜಾಗೊಳಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Photo Credit :

ಮಂಜೇಶ್ವರ ಶಾಸಕನ ವಜಾಗೊಳಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕಾಸರಗೋಡು: ವಂಚನೆ ಆರೋಪಕ್ಕೆ ಸಿಲುಕಿರುವ  ಮಂಜೇಶ್ವರ ಶಾಸಕ ಎಂ. ಸಿ. ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಇಂದು ಕಾಸರಗೋಡು ತಾಲೂಕು ಕಚೇರಿಗೆ  ಜಾಥಾ ನಡೆಸಿದ್ದು, ಪೊಲೀಸ್ ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದಾಗ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.

ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದು, ಪೊಲೀಸರು ಮೂರು ಬಾರಿ ಜಲಫಿರಂಗಿ ಬಳಸಿದರು. ಪ್ರತಿಭಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕೆ . ಶ್ರೀಕಾಂತ್  ಉದ್ಘಾಟಿಸಿದರು. ಉಪಾಧ್ಯಕ್ಷ ಸದಾನಂದ  ರೈ ಅಧ್ಯಕ್ಷತೆ  ವಹಿಸಿದ್ದರು.

ಜಿಲ್ಲಾ ಕಾರ್ಯದರ್ಶಿ ಎನ್. ಸತೀಶ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ , ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ  ಮಧೂರು , ಪಿ  ಆರ್ ಸುನಿಲ್, ಹರೀಶ್  ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ನೇತೃತ್ವ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು