News Karnataka Kannada
Thursday, April 25 2024
ಕರ್ನಾಟಕ

ಮತ್ಸ್ಯ ಕೃಷಿ ಅಭಿವೃದ್ಧಿಗೆ ಕೊಡಗು ಜಿಲ್ಲಾಧಿಕಾರಿ ಸೂಚನೆ

Photo Credit :

ಮತ್ಸ್ಯ ಕೃಷಿ ಅಭಿವೃದ್ಧಿಗೆ ಕೊಡಗು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ: ಜಿಲ್ಲೆಯಲ್ಲಿ ಮೀನು ಕೃಷಿ ಅಭಿವೃದ್ಧಿ ಪಡಿಸಲು ಇರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ‘ಆತ್ಮ ನಿರ್ಭರ ಭಾರತ’ ಕಾರ್ಯಕ್ರಮದಡಿ ‘ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ’ ಪ್ರಸಕ್ತ ಸಾಲಿನ ಜಿಲ್ಲಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಕಾಫಿ ತೋಟ ಮತ್ತು ಕೃಷಿ ಹೊಂಡಗಳಲ್ಲಿ ಮೀನು ಕೃಷಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಬೇಕು.  ಜೊತೆಗೆ ಮತ್ಸ್ಯ ಕೃಷಿ ಸಂಬಂಧ ರೈತರಿಗೆ ತರಬೇತಿ ನೀಡಬೇಕು. ಹಾಗೆಯೇ ಮೀನುಗಳ ಸಾಕಾಣಿಗೆಗೆ ಬೇಕಾದ ಆಹಾರ ಪದಾರ್ಥಗಳಿಗೂ ಆರ್ಥಿಕ ಸಹಕಾರ ನೀಡುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ ಅವರು ಮಾಹಿತಿ ನೀಡಿ ಆತ್ಮ ನಿರ್ಭರ್ ಭಾರತ ಅಡಿಯಲ್ಲಿ ಈ ಯೋಜನೆ ತರಲಾಗಿದೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಒಂದು ಜಿಲ್ಲಾ ಸಮಿತಿ ಇರುತ್ತದೆ ಎಂದು ಅವರು ತಿಳಿಸಿದರು.

ಮೀನುಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ 66 ಕಾರ್ಯಕ್ರಮ ನೀಡಲಾಗಿದೆ. ಈ ಮೂಲಕ ಜಿಲ್ಲೆಯ ಮತ್ಸ್ಯ ಕೃಷಿಗೆ ಅನುಕೂಲವಾಗುವಂತೆ 4.81 ಕೋಟಿ ರೂ.ಗಳ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದರು. ಅಲ್ಲದೆ ಯೋಜನೆ ಮತ್ತು ಕಾರ್ಯಕ್ರಮದ ಕುರಿತು ಹಲವು ಮಾಹಿತಿ ನೀಡಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಅವರು ಈಗಾಗಲೇ ನಿರ್ಮಾಣಗೊಂಡಿರುವ ಕೊಳಗಳಲ್ಲಿ ಮೀನು ಕೃಷಿಗೆ ಅಗತ್ಯ ಅವಕಾಶಗಳನ್ನು ಕಲ್ಪಿಸಿ. ಇದರೊಂದಿಗೆ ಹೊಸ ಕೊಳಗಳ ನಿರ್ಮಾಣಕ್ಕೂ ಅವಕಾಶ ಒದಗಿಸುವಂತೆ ಅವರು ಸೂಚಿಸಿದರು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು