News Karnataka Kannada
Saturday, April 13 2024
Cricket
ಕರ್ನಾಟಕ

ಮನೆ, ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಡಾ. ಹರೀಶಕುಮಾರ್

Photo Credit :

ಮನೆ, ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಜಿಲ್ಲಾಧಿಕಾರಿ ಡಾ. ಹರೀಶಕುಮಾರ್

 

ಕಾರವಾರ:ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಮತ್ತು ದೇವಸ್ಥಾನದಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಆವರಣದಲ್ಲಿ ಜಿಲ್ಲೆಯ ಎಲ್ಲಾ ಎಸಿ, ತಹಸೀಲ್ದಾರ್ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆವಿಡಿಯೋ ಸಂವಾದ ನಡೆಸಿ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಹಾಗೂ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದ್ದು, ಮನೆ ಮತ್ತು ದೇವಸ್ಥಾನಗಳಲ್ಲಿ ಮಾತ್ರ ಪ್ರತಿಷ್ಠಾಪಿಸಲು ಅವಕಾಶವಿದ್ದು ಗಣೇಶ ಚತುರ್ಥಿ ಹಬ್ಬವನ್ನು ಗುಂಪಾಗಿ ಸೇರದೆ ಭಕ್ತಿ ಪೂರ್ವಕವಾಗಿ ಆಚರಿಸುವಂತೆ ಜನರಲ್ಲಿ ಜಾಗೃತೆ ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ, ಮನೆಯಲ್ಲೇ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು ಅಲ್ಲದೇ ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆಗಳು ಜಿಲ್ಲಾಡಳಿದಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ಎಚ್. ಕೆ. ಕೃಷ್ಣಮೂರ್ತಿ, ಎಸಿ ಪ್ರಿಯಾಂಗಾ, ತಹಸೀಲ್ದಾರ್ ಆರ್. ವಿ. ಕಟ್ಟಿ ಸೇರಿದಂತೆ ಇತರರು ಇದ್ದರು.  

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು