News Karnataka Kannada
Wednesday, April 17 2024
Cricket
ಕರ್ನಾಟಕ

ಮಹಿಳೆಗೆ ಸಂತಾನ ಹರಣ ಚಿಕಿತ್ಸೆ ವೇಳೆ ಸಾವು:ಜನರ ಆಕ್ರೋಶ

Photo Credit :

ಮಹಿಳೆಗೆ ಸಂತಾನ ಹರಣ ಚಿಕಿತ್ಸೆ ವೇಳೆ ಸಾವು:ಜನರ ಆಕ್ರೋಶ

ಕಾರವಾರ:  ಕಳೆದ ಮೂರು ದಿನಗಳ ಹಿಂದೆ ಆರೋಗ್ಯಕರವಾಗಿ ಎರಡನೇ ಮಗುವಿಗೆ ಜನ್ಮ ನೀಡಿದ ಮಹಿಳೆಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡುವ ಸಂದರ್ಭದಲ್ಲಿ ನೀಡಲಾಗುವ ಅರವಳಿಕೆಯಿಂದಾಗಿ ಹೃದಯಾಘಾತವಾಗಿದ್ದು ವೈದ್ಯರ ನಿರ್ಲಕ್ಷ್ಯದಿಂದಲೇ ಈ ರೀತಿಯಾಗಿದೆ ಎನ್ನುವ ಆರೋಪ ವ್ಯಕ್ತವಾಗಿದ್ದು ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.

ಕಾರವಾರ ನಗರದ ಸರ್ವೋದಯನಗರದ ನಿವಾಸಿ ಗೀತಾ ಶಿವನಾಥ ಬಾನಾವಳಿಕರ(30) ಮೃತಪಟ್ಟ ಅಮಾಯಕಿ. ಶಸ್ತ್ರ ಚಿಕಿತ್ಸೆಯ ಪೂರ್ವದಲ್ಲಿ ಅರವಳಿಕೆ ಚುಚ್ಚುಮದ್ದನ್ನು ಆಕೆಗೆ ನೀಡಿದಾಗ ನಿತ್ರಾಣಗೊಂಡಿದ್ದಾಳೆ. ಇದರಿಂದ ವೈದ್ಯರು ತಕ್ಷಣ ಐಸಿಯುಗೆ ದಾಖಲಿಸಿ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದ ಆಕೆ ಕೊನೆಯುಸಿರೆಳೆದಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿಂತೆ ಮಹಿಳೆ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರು ಆಸ್ಪತ್ರೆಯ ಎದುರು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ ಪ್ರತಿಭಟಿಸಿದರು.

ಹೆರಿಗೆಯಾದ ಮೂರನೇ ದಿನಕ್ಕೆ ಶಸ್ತ್ರ ಚಿಕಿತ್ಸೆ ನಡೆಸಲು ವೈದ್ಯರು ಹೇಳಿದ್ದರಿಂದ ಆಕೆಯನ್ನು ಶಸ್ತ್ರಚಿಕಿತ್ಸಾ ಕೊಠಡಿಗೆ ಒಯ್ಯಲಾಗಿತ್ತು. ನಂತರ ಅಲ್ಲಿಂದ ಮಹಿಳೆಯನ್ನು ನಿತ್ರಾಣ ಸ್ಥಿತಿಯಲ್ಲಿ ಕಂಡು ಬಂದಿದ್ದಾಳೆ. ನೇರವಾಗಿ ಐಸಿಯು ವಾರ್ಡ್‍ಗೆ ಶಿಫ್ಟ್ ಮಾಡಲಾಗಿತ್ತು. ಮಹಿಳೆಗೆ ಅನಸ್ಥೇಶಿಯಾ ಅಟ್ಯಾಕ್ ಆಗಿದೆ ಎಂದು ಕುಟುಂಬಸ್ಥರಿಗೆ ವೈದ್ಯರು ಮಾಹಿತಿ ನೀಡಿದ್ದಾರೆ.

ಜಿಲ್ಲಾಸ್ಪತ್ರೆಯ ಎದುದು ಪ್ರತಿಭಟಿಸಿದ ಸಾರ್ವಜನಿಕರು ಅನಸ್ಥೇಶಿಯಾ ನೀಡುವಾಗ ವೈದ್ಯರು ತೋರಿದ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದೆ ಎಂದು ದೂರಿದರು. ನೋಡನೋಡುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಸ್ಥಳಕ್ಕೆ ಬಂದ ಪೊಲೀಸರು ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಡುವಂತಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು