News Karnataka Kannada
Saturday, April 13 2024
Cricket
ಕರ್ನಾಟಕ

ಮಾಸ್ಕ್ ಧರಿಸದವರಿಗೆ ಸರಕಾರಿ ಕಚೇರಿಗಳಿಗೆ ಪ್ರವೇಶವಿಲ್ಲ: ಹರೀಶಕುಮಾರ ಕೆ.

Photo Credit :

ಮಾಸ್ಕ್ ಧರಿಸದವರಿಗೆ ಸರಕಾರಿ ಕಚೇರಿಗಳಿಗೆ ಪ್ರವೇಶವಿಲ್ಲ: ಹರೀಶಕುಮಾರ ಕೆ.

ಕಾರವಾರ: ಜನ ಸಾಮಾನ್ಯರ ಅನುಕೂಲಕ್ಕಾಗಿ ಸರಕಾರವು ಕೋವಿಡ್-19 ರ ಅನ್ ಲಾಕ್ 4.00 ಮಾರ್ಗಸೂಚಿಯನ್ನು ಹೊರಡಿಸಿದ್ದು ಅದರಲ್ಲಿ ಅನೇಕ ಅನೇಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದ್ದು, ಆದರೆ ಬಹುತೇಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಇರುವುದು ಜಿಲ್ಲೆಯಲ್ಲಿ ಸಾಮಾನ್ಯ ಎಂಬಂತಾಗಿದೆ. ಇನ್ನು ಮುಂದೆ ಇಂಥವರಿಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ಸೂಚಿಸಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ಸೋಂಕು ಹರಡುವ ಭೀತಿ ಇದ್ದರಿಂದ ಜನರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸೂಚಿಸಿದ ಅವರು, ಉತ್ತರ ಕನ್ನಡ ಜಿಲ್ಲೆ ಕೊರೋನಾ ಸೋಂಕು ಹರಡುವಿಕೆ ತಡೆಯುವಲ್ಲಿ ರಾಜ್ಯಕ್ಕೇ ಮಾದರಿಯಾಗಿದ್ದು , ಈ ಹಂತದಲ್ಲಿ ಕೊರೋನಾ ನಿಯಂತ್ರಣದಲ್ಲಿದೆಯೆಂದು ನಾವು ಮೈಮರೆಯುವ ಹಾಗಿಲ್ಲ. ಕೊವಿಡ್-19 ಇದು ಬಹುಬೇಗ  ವ್ಯಕ್ತಿಯಿಂದ ವ್ಯಕ್ತಿಗೆ ಹರಡುವದರಿಂದ  ಇದರ ನಿಯಂತ್ರಣ ಸಾರ್ವಜನಿಕರ ಸಹಕಾರವಿಲ್ಲದೇ ಸಾಧ್ಯವಿಲ್ಲ.

ಅಲ್ಲದೇ ಮಾರ್ಗಸೂಚಿಯ ಅನುಬಂಧ-1 ರಂತೆ ಮಾಸ್ಕ್ ಬಳಸದೇ ಇರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವದು ದಂಡನೀಯ ಅಪರಾಧ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು ಜಿಲ್ಲೆಯ ಸರ್ಕಾರಿ ಕಚೇರಿಗಗಳಿಗೆ ಮಾಸ್ಕ ಧರಿಸದೇ ಬರುವಂತಹ ಸಾರ್ವಜನಿಕರಿಗೆ ಕಚೇರಿಗೆ ಪ್ರವೇಶ ನೀಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಇದನ್ನು  ಉಲ್ಲಂಘನೆ ಮಾಡಿದವರ ವಿರುದ್ಧ ಸಾಂಕ್ರಾಮೀಕ ರೋಗಗಳ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಭಾರತೀಯ ದಂಡ ನೀತಿ ಸಂಹಿತೆ 1860  ಮತ್ತು ದಂಡ ಪ್ರಕ್ರಿಯಾ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ನಿಯಮಾನುಸಾರ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ ಸರಕಾರದ ಆದೇಶದಂತೆ  ನಗರ ಪ್ರದೇಶದಲ್ಲಿ 200 ರೂ. ಹಾಗೂ ಇನ್ನುಳಿದ ಪ್ರದೇಶದಲ್ಲಿ 100 ರೂ. ದಂಡವನ್ನು ವಿಧಿಸಲು ಹಾಗೂ ಯಾವುದೇ ವ್ಯಾಪಾರದ ಸ್ಥಳದಲ್ಲಿ ಮಾಸ್ಕ್ ಧರಿಸದೇ ಇದ್ದಲ್ಲಿ ಅಂತಹ ಅಂಗಡಿ ಮಾಲಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು  ಅಲ್ಲದೇ ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಕಟ್ಟಿಕೊಂಡು ಇರುವುದು ಕಂಡುಬಂದಲ್ಲಿ ಮೊದಲು ಎಚ್ಚರಿಕೆ ನೀಡುವುದು. ನಂತರ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸಂಬಂಧಿಸಿದ ಸ್ಥಳಿಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದರು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು