News Karnataka Kannada
Friday, April 19 2024
Cricket
ಕರ್ನಾಟಕ

ಮಾಸ್ಕ್ ಧರಿಸದಿದ್ದಲ್ಲಿ ಗ್ರಾಮೀಣ ಪ್ರದೇಶದಲ್ಲೂ ದಂಡ: ಡಿಸಿ ಹರೀಶಕುಮಾರ

Photo Credit :

ಮಾಸ್ಕ್ ಧರಿಸದಿದ್ದಲ್ಲಿ ಗ್ರಾಮೀಣ ಪ್ರದೇಶದಲ್ಲೂ ದಂಡ: ಡಿಸಿ ಹರೀಶಕುಮಾರ

ಕಾರವಾರ: ಗ್ರಾಮೀಣ ಪ್ರದೇಶದ ಸಾರ್ವಜನಿಕ ಅಥವಾ ಜನರು ಗುಂಪಾಗಿ ಸೇರಿರುವ ಸ್ಥಳಗಳಲ್ಲಿ ಮಾಸ್ಕ್ ಹಾಕಿಕೊಳ್ಳದೇ ಇರುವ ವ್ಯಕ್ತಿಗಳಿಗೆ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಅವರು ಸೂಚಿಸಿದ್ದಾರೆ.

ಕಾರವಾರದ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಎಸಿ, ತಹಸೀಲ್ದಾರ್, ತಾಲೂಕು ಆರೋಗ್ಯಾಧಿಕಾರಿ ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿ ಜಿಲ್ಲೆಯಲ್ಲಿ ಈಗಾಗಲೇ ನಗರ ಪ್ರದೇಶದಲ್ಲಿರುವ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿ ಮಾಡಲಾಗಿದೆ. ಅದೇ ರೀತಿ ಗ್ರಾಮ ಪಂಚಾಯತ್ ನಲ್ಲೂ ಕೂಡ ಕ್ರಮ ಕೈಗೊಳ್ಳಿ ಎಂದು ಅವರು ತಿಳಿಸಿದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಕಷ್ಟ ಅನಿಸಬಹುದು ಆದರೆ ಮಾಸ್ಕ್ ಧರಿಸುವುದು ಸುಲಭ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ಮಾಸ್ಕ್ ಧಾರಣೆ ನಿಯಮ ಉಲ್ಲಂಘಿಸುವರಿಗೆ ದಂಡ ವಿದಿಸಬೇಕು ಎಂದರು.

ಕೋವಿಡ್ -19 ಪರೀಕ್ಷೆ ಹೆಚ್ಚಿನ ಸಂಖ್ಯೆಯಲ್ಲಿ ಆಗಬೇಕು. ಒಂದು ಪಾಸಿಟಿವ್ ಕೇಸ್ ಕಂಡುಬಂದಲ್ಲಿ ಅಲ್ಲಿ ಕನಿಷ್ಠ 10 ಆದರೂ ಕೋವಿಡ್-19 ಪರೀಕ್ಷೆ ಆಗಬೇಕು. ಲಕ್ಷಣವಿಲ್ಲದಿದ್ದಲ್ಲಿ ಹೋಮ್ ಐಸೆಲೆಷನ್ ಗೆ ಮತ್ತು ಲಕ್ಷಣಗಳು ಕಂಡುಬಂದಲ್ಲಿ ಆಸ್ಪತ್ರೆ ದಾಖಲೆಗೆ ಸೂಚಿಸಬೇಕು. ಪ್ರತಿ ಆಸ್ಪತ್ರೆಯಲ್ಲೂ ಚಿಕಿತ್ಸೆ ದೊರೆಯಲು ಕ್ರಮಕೈಗೊಳ್ಳಬೇಕು. ಕೋವಿಡ್ ಅಲ್ಲದ ಕೇಸಗಳಿಗೂ ಅಷ್ಟೇ ಪ್ರಾಮುಖ್ಯತೆ ನೀಡಿ ಗಮನ ಹರಿಸಬೇಕು ಎಂದರು.

ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಶಿಷ್ಟಾಚಾರದಂತೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಬೇಕು. ಆದುನಿಕ ಚಿಕಿತ್ಸಾ ವಿಧಾನಗಳನ್ನೆಲ್ಲ ತುರ್ತಾಗಿ ಬಳಸಿಕೊಳ್ಳಬೇಕು. ಪಕ್ಕದ ಜಿಲ್ಲೆಯ ಆಸ್ಪತ್ರೆಗಳಲ್ಲಿ ಜಿಲ್ಲೆಯ ಜನರಿಗೆ ಚಿಕಿತ್ಸೆಗೆ ದಾಖಲಾಗುವ ಅವಕಾಶ ಕಷ್ಟವಾಗಿದ್ದು, ಜನರಿಗೆ ತೊಂದರೆ ಆಗದಂತೆ ಚಿಕಿತ್ಸೆ ನೀಡಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದರು.

ಎಲ್ಲ ರೋಗಿಗಳನ್ನು ಕಾರವಾರ ಆಸ್ಪತ್ರೆಗೆ ಕಳುಹಿಸಲು ಮುಂದಾಗದೆ, ಸ್ಥಳೀಯವಾಗಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಆನ್ಲೈನ್ ಮತ್ತು ವರ್ಚುವಲ್ ಪ್ಲಾಟಫಾರ್ಮ್ ಮೂಲಕ ಹಿರಿಯ ವೈದ್ಯರ ನೆರವು ಪಡೆಯಬೇಕು ಸ್ಥಳೀಯವಾಗಿದ್ದಲ್ಲಿ ಹೆಚ್ಚಿನ ಗಮನ ನೀಡಲು ಸಾಧ್ಯವಾಗುತ್ತದೆ. ಅದೇ ರೀತಿ ಡಿಸ್ ಚಾರ್ಜ್ ಬಗ್ಗೆ ಕೂಡ ಗಮನ ಕೊಡಬೇಕು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್. ಕೆ., ಎಎಸ್ಪಿ ಬದರಿನಾಥ್ ಎಸ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು