News Karnataka Kannada
Tuesday, April 16 2024
Cricket
ಕರ್ನಾಟಕ

ಮಾಸ್ಕ್ ಬಳಕೆ ಬಗ್ಗೆ ಅರಿವು ಮೂಡಿಸಿ: ಉತ್ತರ ಕನ್ನಡ ಡಿಸಿ

Photo Credit :

ಮಾಸ್ಕ್ ಬಳಕೆ ಬಗ್ಗೆ ಅರಿವು ಮೂಡಿಸಿ: ಉತ್ತರ ಕನ್ನಡ ಡಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆ:ಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಬಳಕೆ ಬಗ್ಗೆ ಅರಿವು ಮೂಡಿಸಬೇಕು. ಜೊತೆಗೆ ಮಾಸ್ಕ್ ಸರಿಯಾಗಿ ಬಳಸದಿದ್ದಲ್ಲಿ ಅಂತಹವರಿಗೆ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ  ಡಾ. ಹರೀಶಕುಮಾರ ಕೆ. ಅವರು ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಕಾರವಾರದ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಎಸಿ ಮತ್ತು ತಹಸೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದು ಅವರು ಮಾತನಾಡಿ,  ಇತ್ತೀಚಿಗೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚಳವಾಗಿತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಪ್ರತಿಯೊಬ್ಬರೂ ಮನೆಯಿಂದ ಹೊರಡುವಾಗ ಸರಿಯಾಗಿ ಮಾಸ್ಕ್ ಧರಿಸಬೇಕು, ಮಾತನಾಡುವಾಗ ಮಾಸ್ಕ ಧರಿಸಿಯೇ ಮಾತನಾಡಬೇಕು  ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜೊತೆಗೆ ಸಂತೆ ದಿನಗಳಲ್ಲಿ ಅಂತರ ಕಾಯ್ದುಕೊಳ್ಳುತ್ತಿದ್ದಾರೆಯೇ ಎಂಬುದನ್ನು ಗಮನಿಸಬೇಕು ಎಂದರು.

ಮಾಸ್ಕ್ ಸರಿಯಾಗಿ ಬಳಸದಿರುವವರಿಗೆ ದಂಡ ವಿಧಿಸುವಾಗ ಪೊಲೀಸ್ ಇಲಾಖೆಯ ಸಹಕಾರ ಪಡೆದುಕೊಳ್ಳಬೇಕು. ದಂಡ ವಸೂಲಿ ಸಂಬಂಧಿಸಿದಂತೆ ಛಾಯಾಚಿತ್ರ ಸಹಿತ ಕಾರ್ಯ ಪ್ರವೃತ್ತರಾಗಬೇಕು ಮತ್ತು ವಿವಿಧ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಸುದ್ದಿ ಯಾಗಿ ಪ್ರಚಾರ ಪಡಿಸಬೇಕೆಂದು ಅವರು ಸಲಹೆ  ನೀಡಿದರು.

ಕೋವಿಡ್‍ನಿಂದ ಮೃತಪಟ್ಟವರ ಮಾಹಿತಿಯನ್ನು ಆಯಾ ದಿನದಲ್ಲಿಯೇ ನೀಡಬೇಕು ಎಂದು ಅವರು ಹೇಳಿದರು

 ಹೆಚ್ಚುವರಿ  ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.  ಕೆ.  ಅವರು ಮಾತನಾಡಿ ತಹಶೀಲ್ದಾರರು, ಇಒಗಳು ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪ್ರಾಥಮಿಕ ಸಂಪರ್ಕಿತರನ್ನು ಗುರ್ತಿಸಿ ಕೋವಿಡ್ ಪರೀಕ್ಷೆ ಮಾಡಿಸಬೇಕು. ಜನದಟ್ಟಣೆ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಹೆಚ್ಚಿನ ಕೋವಿಡ್ ಪರೀಕ್ಷೆ ಮಾಡಬೇಕು ಎಂದರು. 

 ಈ ಸಂದರ್ಭದಲ್ಲಿ  ಉಪವಿಭಾಗಾಧಿಕಾರಿಗಳಾಧ ಅಜಿತ್, ಪ್ರಿಯಾಂಗಾ ಎಂ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ  ತಹಸೀಲ್ದಾರ್ ಆರ್. ವಿ. ಕಟ್ಟಿ ಸೇರಿದಂತೆ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು