News Karnataka Kannada
Sunday, April 14 2024
Cricket
ಕರ್ನಾಟಕ

ಮೀನುಗಾರರ ಸಮುದಾಯ ಭವನ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್

Photo Credit :

ಮೀನುಗಾರರ ಸಮುದಾಯ ಭವನ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್

ಕಾರವಾರ: ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್, ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರವಾರ ವಿಧಾನಸಭಾ ಸದಸ್ಯರ ಪ್ರದೇಶಾಭಿವೃದ್ಧಿ ಅನುದಾನ ಹಾಗೂ ಫೆಡರೇಶನ್ ಬಂಡವಾಳ ವಿನಿಯೋಗಿಸಿ ನಿರ್ಮಿಸಿದ ಸಮುದಾಯ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.

ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮೀನುಗಾರರಿದ್ದು ಮೂಲಭೂತ ಸೌಕರ್ಯದಿಂದ ವಂಚಿತರಾಗುತ್ತಿದ್ದರು. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೀನುಗಾರರ ಏಳಿಗೆಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಗೆ ಹಲವಾರ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಅವು ಅನುಷ್ಠಾನಕ್ಕೆ ಬಂದರೆ ಸ್ಥಳೀಯ ಹಾಗೂ ಜಿಲ್ಲೆಯ ಮೀನುಗಾರರಿಗೆ ಅನುಕೂಲವಾಗುತ್ತದೆ.

ಮೀನುಗಾರ ಮಹಿಳೆಯರ ಮತ್ತು ಮೀನುಗಾರರಿಗೆ ನೀಡುವ ಸಾಲ ಸೌಲಭ್ಯಗಳ ಬಗ್ಗೆ ಮೀನುಗಾರಿಕೆ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಜಿಲ್ಲೆಯಲ್ಲಿ ಮೂರು ಬಾರಿ ಸಭೆ ಕರೆದು ಚರ್ಚಿಸಿದ್ದಾರೆ. ಅದನ್ನೂ ಸಹ ಶೀಘ್ರದಲ್ಲಿ ಜನರಿಗೆ ತಲುಪಿಸಲಾಗುವುದು. ಈ ಹಿಂದೆ ತೆಗೆದುಕೊಂಡ ಸಾಲದ ಮನ್ನಾ ಸಾಲಮನ್ನಾ ಪ್ರಕ್ರಿಯೆಯು ನಡೆಯುತ್ತಿದ್ದು ಅದನ್ನೂ ಪೂರ್ಣಗೊಳಿಸಲಾಗುವುದು. ಈ ಸಂದರ್ಭದಲ್ಲಿ ನನ್ನೊಂದಿಗೆ ಗಣಪತಿ ಉಳ್ವೇಕರ, ರೋಷನಿ ಮಾಳ್ಸೆಕರ್, ಪಿ.ಬಿ.ಹರಿಕ್ರಂತ, ಮೀನುಗಾರ ಮುಖಂಡರು, ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು