News Karnataka Kannada
Sunday, April 14 2024
Cricket
ಕರ್ನಾಟಕ

ಮುಸ್ಲಿಂ ಸಹಕಾರ ಸಂಘದ ಸುತ್ತ ಸಂಶಯಗಳ ಹುತ್ತ: ತನಿಖೆಗೆ ಆಗ್ರಹ

Photo Credit :

ಮುಸ್ಲಿಂ ಸಹಕಾರ ಸಂಘದ ಸುತ್ತ ಸಂಶಯಗಳ ಹುತ್ತ: ತನಿಖೆಗೆ ಆಗ್ರಹ

ಮಡಿಕೇರಿ: ವಿರಾಜಪೇಟೆಯ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿರುವ ಬಗ್ಗೆ ಸಂಶಯವಿದೆ ಎಂದು ಆರೋಪಿಸಿರುವ ಸಂಘದ ನಿರ್ದೇಶಕರುಗಳಾದ ಡಿ.ಐ.ವೇಜಾಸ್ ಹಾಗೂ ಪಿ.ಹನೀಫ್, ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅವ್ಯವಹಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ತಪ್ಪಿತಸ್ತರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ವ್ಯವಸ್ಥಾಪಕರು ಸರಿಯಾದ ಲೆಕ್ಕ ಪತ್ರಗಳನ್ನು ಮಂಡಿಸುತ್ತಿಲ್ಲ. ಅವ್ಯವಹಾರದ ಬಗ್ಗೆ ಪ್ರಶ್ನಿಸಿದರೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಸಂಬಂಧಿಸಿದ ಇಲಾಖೆಗೆ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಸಂಘ ಹೆಚ್ಚು ಬಡ್ಡಿಯ ಆಮಿಷವೊಡ್ಡಿದ ಪರಿಣಾಮ ದೊಡ್ಡ ಮೊತ್ತದ ನಿರಕು ಠೇವಣಿ ಇಟ್ಟವರಿಗೆ ಅಸಲು ಕೂಡ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಇಷ್ಟೆಲ್ಲಾ ಗೊಂದಲದ ನಡುವೆಯೂ ಸಂಘ ಲಾಭದಲ್ಲಿದೆ ಎಂದು ಆಡಳಿತ ಮಂಡಳಿ ವರದಿ ನೀಡುತ್ತಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ. ಉನ್ನತ ಮಟ್ಟದ ಅಧಿಕಾರಿಗಳ ಮೂಲಕ ಲೆಕ್ಕಪತ್ರ ಪರಿಶೋಧನೆ ನಡೆಸಿ ತನಿಖೆಗೆ ಒಳಪಡಿಸಬೇಕು ಎಂದು ಡಿ.ಐ.ವೇಜಾಸ್ ಹಾಗೂ ಪಿ.ಹನೀಫ್ ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು