News Karnataka Kannada
Thursday, April 18 2024
Cricket
ಕರ್ನಾಟಕ

ಮೈಸೂರಿನಲ್ಲಿ ಅಣು ವಿಜ್ಞಾನಿ ನಿಗೂಢ ನಾಪತ್ತೆ

Photo Credit :

ಮೈಸೂರಿನಲ್ಲಿ ಅಣು ವಿಜ್ಞಾನಿ ನಿಗೂಢ ನಾಪತ್ತೆ

ಮೈಸೂರು: ಇಲ್ಲಿನ ಭಾಭಾ ಪರಮಾಣು ಸಂಶೋಧನಾ ಸಂಸ್ಥೆಯಲ್ಲಿ ಅಪರೂಪದ ವಸ್ತುಗಳ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ವಿಜ್ಞಾನಿ ಕಳೆದ ನಾಲ್ಕು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಸ್ಥೆಯಲ್ಲಿ ಸಹಾಯಕ ವೈಜ್ಞಾನಿಕ ಅಧಿಕಾರಿ ಆಗಿದ್ದ ಅಭಿಷೇಕ್ ರೆಡ್ಡಿ ಗುಲ್ಲಾ ಅವರೇ ನಾಪತ್ತೆ ಆದವರು. ಇಲವಾಲದಲ್ಲಿರುವ ಕಾವೇರಿ ಲೇಔಟ್​ನಲ್ಲಿ ವಾಸವಾಗಿದ್ದರು. ಮೈಸೂರಿನಿಂದ 15 ಕಿ.ಮೀ ದೂರದಲ್ಲಿರುವ ಸಂಸ್ಥೆಯಲ್ಲಿ ಕಳೆದ ಒಂದು ವರ್ಷದಿಂದ ಇವರು ಕೆಲಸ ಮಾಡುತಿದ್ದರು ಎನ್ನಲಾಗಿದೆ. ಅಲ್ಲದೆ ಅವರು ಖಿನ್ನತೆ ಮತ್ತು ಮೈಗ್ರೇನ್‌ನಿಂದ ಬಳಲುತ್ತಿದ್ದರು ಎಂದೂ ಸಹೋದ್ಯೋಗಿಯೊಬ್ಬರು ತಿಳಿಸಿದ್ದಾರೆ.

ಅಭಿಷೇಕ್​ ರೆಡ್ಡಿ ಯಾರಿಗೂ ತಿಳಿಸದೆ ಹೊರಟು ಹೋಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎರಡು ತಿಂಗಳ ಹಿಂದೆ ಹೆತ್ತವರ ಮರಣದ ನಂತರ ರೆಡ್ಡಿ ಒಬ್ಬಂಟಿಯಾಗಿದ್ದಾರೆ ಎಂದು ಇಲವಾಲ ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಎನ್‌. ಎಚ್. ಯೋಗಾನಂದ ತಿಳಿಸಿದ್ದಾರೆ.

ಅಕ್ಟೋಬರ್ 6ರ ಮಧ್ಯಾಹ್ನ ರೆಡ್ಡಿ, ದ್ವಿಚಕ್ರ ವಾಹನದಲ್ಲಿ ತಮ್ಮ ಮನೆಯಿಂದ ಹೊರಹೋಗುವುದನ್ನು ಅವರ ನೆರೆಹೊರೆಯವರು ಕೊನೆಯದಾಗಿ ನೋಡಿದ್ದರು. ಈ ಬಳಿಕ ಅವರು ಮತ್ತೆ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇಲವಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು