News Karnataka Kannada
Monday, April 22 2024
Cricket
ಕರ್ನಾಟಕ

ಲಾಕ್​ಡೌನ್ ಹೆಸರಲ್ಲಿ ಜನರ ಮೇಲೆ ದರ್ಪ ತೋರುವುದನ್ನು ನಿಲ್ಲಿಸಿ, ; ಹೆಚ್​.ಡಿ. ಕುಮಾರಸ್ವಾಮಿ ಒತ್ತಾಯ

Photo Credit :

ಲಾಕ್​ಡೌನ್ ಹೆಸರಲ್ಲಿ ಜನರ ಮೇಲೆ ದರ್ಪ ತೋರುವುದನ್ನು ನಿಲ್ಲಿಸಿ,  ; ಹೆಚ್​.ಡಿ. ಕುಮಾರಸ್ವಾಮಿ ಒತ್ತಾಯ

ಬೆಂಗಳೂರು ; ಇಂದಿನಿಂದ ಕರ್ನಾಟಕದಲ್ಲಿ 14 ದಿನಗಳ ಕಾಲ ಲಾಕ್​ಡೌನ್ ಘೋಷಣೆಯಾಗಿದೆ. 2 ದಿನಗಳ ಹಿಂದಿನಿಂದಲೇ ಪೊಲೀಸರು ಕಾರ್ಯೋನ್ಮುಖರಾಗಿದ್ದು, ಸಕಾರಣವಿಲ್ಲದೆ ರಸ್ತೆಗಿಳಿದವರಿಗೆ ಲಾಠಿ ರುಚಿ ತೋರಿಸುತ್ತಿದ್ದಾರೆ. ಈಗಾಗಲೇ ಸಾವಿರಾರು ವಾಹನಗಳನ್ನು ಸೀಜ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಲಾಕ್​ಡೌನ್​ನಿಂದ ಜೀವನ ನಡೆಸಲು ಸಮಸ್ಯೆ ಉಂಟಾಗಿರುವ ವರ್ಗಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು, ಮನೆಯಿಂದ ಹೊರಗೆ ಬರುವ ಜನರ ಮೇಲೆ ದರ್ಪ ತೋರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್ ಅನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರವನ್ನು ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು. ಆದರೆ ಸರ್ಕಾರ ಜನಸಾಮಾನ್ಯರಿಗೆ ಇನ್ನಷ್ಟು ತೊಂದರೆ ಮಾಡುತ್ತಿದೆ ಎಂದು ಹೆಚ್​.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಲಾಕ್ ಡೌನ್‌ನಿಂದ ಜೀವ ಉಳಿಸಿ ಎಂದು ಮೊದಲೇ ಹೇಳಿದ್ದೆ. ಆದರೆ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು. ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಪರಿಹಾರ ಕ್ರಮಗಳಿಂದ ವಿಮುಖವಾಗಿ ಸರ್ಕಾರ ಬೇಜವಾಬ್ದಾರಿತನ ತೋರಿದೆ. ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರ ಸರ್ಕಾರವೂ ಇದೇ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟೀಕಿಸಿದ್ದಾರೆ.
ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿಯಾಗಿದೆ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ ನಿರ್ಮಾಣವಾಗಿದೆ. ಸರ್ಕಾರವೇ ಇದಕ್ಕೆ ಹೊಣೆ. ಹಾಗಾಗಿ, ಸರ್ಕಾರವೇ ಅವರಿಗೆ ಪರಿಹಾರ ನೀಡಬೇಕು ಎಂಬುದು ನನ್ನ ನಿಲುವು ಮತ್ತು ಸಲಹೆ. ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಬೇಕಿತ್ತು ಮತ್ತು ಅದಕ್ಕೆ ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ ಎಂದು ಹೆಚ್​.ಡಿ. ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು